ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಹಿನ್ನಡೆ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ಓಲಾಟಕ್ಕೆ ಗುರಿಯಾಯಿತು.
ಬೆಳಗ್ಗೆ 10.45ರ ಸುಮಾರಿಗೆ ಸೆನೆಕ್ಸ್ 89.22 ಅಂಕಗಳ ನಷ್ಟದೊಂದಿಗೆ 38,641.50 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27.10 ಅಂಕಗಳ ನಷ್ಟದೊಂದಿಗೆ 11,528.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದು ಬೆಳಗ್ಗಿನ ವಹಿವಾಟಿನಲ್ಲಿ ಟಾಪ್ ಲೂಸರ್‌ಗಳಾದ ಟಿಸಿಎಸ್, ಟಾಟಾ ಮೋಟರ್, ಬಜಾಜ್ ಫಿನಾನ್ಸ್, ವೇದಾಂತ, ಬಜಾಜ್ ಆಟೋ, ಭಾರ್ತಿ ಏರ್‌ಟೆಲ್ ಮತ್ತು ಒಎನ್‌ಜಿಸಿ ಶೇರುಗಳು ಶೇ.1.51ರ ನಷ್ಟಕ್ಕೆ ಗುರಿಯಾದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 15 ಪೈಸೆಗಳ ಕುಸಿತವನ್ನು ಕಂಡು 68.66 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಬ್ರೆಂಟ್ ಅಂತಾರಾಷ್ಟ್ರೀಯ ಕಚ್ಚಾತೈಲ ಇಂದು ಶೇ.0.89ರ ಏರಿಕೆಯನ್ನು ದಾಖಲಿಸಿ ಬ್ಯಾರಲ್ ಗೆ 64.73 ಡಾಲರ್‌ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.