ಮುಂಬಯಿ : ವಿದೇಶಿ ಬಂಡವಾಳದ ನಿರಂತರ ಹೊರ ಹರಿವು ಮತ್ತು ಜಾಗತಿಕ ಶೇರು ಪೇಟೆಗಳಲ್ಲಿ ಕಂಡು ಬಂದಿರುವ ನಿರುತ್ಸಾಹದ ವಾತಾವರಣವನ್ನು ಅನುಲಕ್ಷಿಸಿ ಮುಂಬಯಿ ಶೇರು ಪೇಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಅಲ್ಪ ಏರಿಕೆಯನ್ನು ದಾಖಲಿಸಿತು.
ನಿನ್ನೆ ಬುಧವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 203.65 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತಾದರೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 65.05 ಅಂಕಗಳ ನಷ್ಟವನ್ನು ಅನುಭವಿಸಿತ್ತು.
ಬೆಳಗ್ಗೆ 10.45 ರ ಸುಮಾರಿಗೆ ಸೆನ್ಸೆಕ್ಸ್ 1.82 ಅಂಕಗಳ ನಷ್ಟದೊಂದಿಗೆ 37,113.06 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 1.30 ಅಂಕಗಳ ನಷ್ಟದೊಂದಿಗೆ 11,155.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಟಾಟಾ ಮೋಟರ್, ವೇದಾಂತ, ಇನ್‌ಫೋಸಿಸ್, ಬಜಾಜ್ ಫಿನಾನ್ಸ್, ಪವರ್ ಗ್ರಿಡ್, ಎಸ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್, ಎನ್‌ಟಿಪಿಸಿ, ಟಾಟಾ ಸ್ಟೀಲ್, ಹೀರೋ ಮೋಟೋ ಕಾರ್ಪ್, ಎಚ್ ಯು ಎಲ್, ಎಚ್ ಸಿ ಎಲ್ ಟೆಕ್ ಮತ್ತು ಏಶ್ಯನ್ ಪೇಂಟ್ ಶೇರುಗಳು ಶೇ. 3.39ರ ಏರಿಕೆಯನ್ನು ದಾಖಲಿಸಿದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಅಲ್ಪ ಮುನ್ನಡೆಯನ್ನು ಸಾಧಿಸಿ 70.31 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಬ್ರೆಂಟ್ ಕಚ್ಚಾತೈಲ ಬೆಲೆ ಶೇ.0.56ರ ಏರಿಕೆಯನ್ನು ದಾಖಲಿಸಿ ಬ್ಯಾರಲ್ ಗೆ 72.17 ಡಾಲರ್ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.