ಮುಂಬಯಿ : ವಿದೇಶಿ ಬಂಡವಾಳದ ಹೊರ ಹರಿವು ನಿರಂತರವಾಗಿ ಸಾಗಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಸುಮಾರು 200 ಅಂಕಗಳ ಓಲಾಟವನ್ನು ಕಂಡು ಬಳಿಕ ಅಲ್ಪ ಏರಿಕೆಗೆ ಸೀಮಿತವಾಯಿತು.
ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್ 31.53 ಅಂಕಗಳ ಏರಿಕೆಯೊಂದಿಗೆ 39,848.01 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 5.40 ಅಂಕಗಳ ಏರಿಕೆಯೊಂದಿಗೆ 11,915.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಟಾಪ್ ಗೇನರ್‌ಗಳ ಪೈಕಿ ಎಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಏಶ್ಯನ್ ಪೇಂಟ್, ಮಹೀಂದ್ರ, ಎಕ್ಸಿಸ್ ಬ್ಯಾಂಕ್, ಎನ್‌ಟಿಪಿಸಿ ಮತ್ತು ಪವರ್ ಗ್ರಿಡ್ ಶೇರುಗಳು ಶೇ. 2.23ರ ಏರಿಕೆಯನ್ನು ಕಂಡವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 13 ಪೈಸೆಗಳ ಏರಿಕೆ ದಾಖಲಿಸಿ 68.81 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಅಂತಾರಾಷ್ಟ್ರೀಯ ಬ್ರೆಂಟ್ ಕಚ್ಚಾ ತೈಲ ಶೇ.0.34ರ ಏರಿಕೆಯನ್ನು ದಾಖಲಿಸಿ ಬ್ಯಾರಲ್ ಗೆ 62.61 ಡಾಲರ್ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.