ಮುಂಬಯಿ: ರಷ್ಯಾ, ಉಕ್ರೇನ್ ನಡುವಿನ ಯುದ್ಧ ತೀವ್ರಗೊಂಡಿರುವ ನಡುವೆಯೇ ಬುಧವಾರ (ಮಾರ್ಚ್ 02) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 778 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಉಕ್ರೇನ್‌ನಲ್ಲಿ ಎರಡನೇ ಭಾರತೀಯ ವಿದ್ಯಾರ್ಥಿ ಸಾವು; ದೇಶವಾಸಿಗಳಲ್ಲಿ ಆತಂಕ
ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 778.38 ಅಂಕ ಕುಸಿತವಾಗಿದ್ದು, 55,468.90 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 187.95 ಅಂಕ ಇಳಿಕೆಯಾಗಿದ್ದು, 16,605.95 ಅಂಕಗಳ ಮಟ್ಟ ತಲುಪಿದೆ.
ಮಾರುತಿ, ಡಾ.ರೆಡ್ಡೀಸ್, ಏಷ್ಯನ್ ಪೇಂಟ್ಸ್, ಐಸಿಐಸಿಐ ಬ್ಯಾಂಕ್, ಎಚ್ ಡಿಎಫ್ ಸಿ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಟಾಟಾ ಸ್ಟೀಲ್, ಟೈಟಾನ್, ರಿಲಯನ್ಸ್ ಮತ್ತು ನೆಸ್ಲೆ ಇಂಡಿಯಾ ಷೇರು ಲಾಭಗಳಿಸಿದೆ.
ಜಾಗತಿಕವಾಗಿಯೂ ಹಾಂಗ್ ಕಾಂಗ್, ಟೋಕಿಯೋ ಮತ್ತು ಶಾಂಘೈ ಷೇರುಪೇಟೆ ಸೆನ್ಸೆಕ್ಸ್ ಇಳಿಕೆಯಾಗಿದ್ದು, ಸಿಯೋಲ್ ಷೇರುಮಾರುಕಟ್ಟೆ ಸೆನ್ಸೆಕ್ಸ್ ಏರಿಕೆಯಲ್ಲಿ ವಹಿವಾಟು ನಡೆಸಿದೆ. ಅಲ್ಲದೇ ಯುರೋಪ್ ಷೇರುಮಾರುಕಟ್ಟೆಯಲ್ಲಿ ಮಧ್ಯಾಹ್ನ ಮಿಶ್ರ ವಹಿವಾಟು ಕಂಡಿರುವುದಾಗಿ ವರದಿ ತಿಳಿಸಿದೆ.