ಮುಂಬಯಿ : ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 265.54 ಅಂಕಗಳ ಏರಿಕೆಯನ್ನು ದಾಖಲಿಸಿ 38,98.45 ಅಂಕಗಳ ಮಟ್ಟಕ್ಕೇರಿತು.
ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕತೆ ಕಂಡು ಬಂದಿರುವುದು, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಿರುವುದೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯಲ್ಲಿ ತೇಜಿ ಕಂಡು ಬರುತ್ತಿದೆ.
ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್ 276.57 ಅಂಕಗಳ ಏರಿಕೆಯೊಂದಿಗೆ 38,949.48 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 68.30 ಅಂಕಗಳ ಏರಿಕೆಯೊಂದಿಗೆ 11,692.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿಂದು ಟಾಟಾ ಮೋಟರ್, ಟಾಟಾ ಸ್ಟೀಲ್, ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್, ಎಸ್‌ಬಿಐ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು: ಹಿಂಡಾಲ್ಕೋ, ಟಾಟಾ ಮೋಟರ್, ವೇದಾಂತ, ಗೇಲ್, ಟಾಟಾ ಸ್ಟೀಲ್; ಟಾಪ್ ಲೂಸರ್‌ಗಳು : ಐಓಸಿ, ಇಂಡಿಯಾಬುಲ್ಸ್ ಹೌಸಿಂಗ್, ಬಿಪಿಸಿಎಲ್, ಕೋಲ್ ಇಂಡಿಯಾ, ಒಎನ್‌ಜಿಸಿ.