ಮುಂಬಯಿ : ಭಾರತ – ಪಾಕ್ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹೊರತಾಗಿಯೂ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 256 ಅಂಕಗಳ ಜಿಗಿತವನ್ನು ದಾಖಲಿಸಿ ಅಚ್ಚರಿ ಮೂಡಿಸಿತು.
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಾಗಿರುವುದು, ವಹಿವಾಟುದಾರರಿಂದ ನಾಳೆ ಗುರುವಾರ ನಡೆಯಲಿರುವ ವಾಯಿದೆ ವಹಿವಾಟು (F&O) ಚುಕ್ತಾ ಪ್ರಯುಕ್ತ ಶಾರ್ಟ್ ಕವರಿಂಗ್ ನಡೆದಿರುವುದು ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ತೇಜಿ ಕಂಡು ಬಂತು.
ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್ 384.89 ಅಂಕಗಳ ಮುನ್ನಡೆಯೊಂದಿಗೆ 36,348.60 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 97.70 ಅಂಕಗಳ ಮುನ್ನಡೆಯೊಂದಿಗೆ 10,933.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ರಿಲಯನ್ಸ್, ಎಕ್ಸಿಸ್ ಬ್ಯಾಂಕ್, ಟಿಸಿಎಸ್, ಝೀ ಎಂಟರ್‌ಟೇನ್‌ಮೆಂಟ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಸಕ್ರಿಯವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 6 ಪೈಸೆಯ ಏರಿಕೆಯನ್ನು ದಾಖಲಿಸಿ 71.01 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.