ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಶುಕ್ರವಾರದ ಆರಂಭಿಕ ವಹಿವಾಟನಲ್ಲಿ 300 ಅಂಕಗಳ ಜಿಗಿತವನ್ನು ದಾಖಲಿಸಿ, 40,000 ಅಂಕಗಳ ದಾಖಲೆಯ ಮಟ್ಟವನ್ನು ಪುನರ್ ಸಂಪಾದಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 81.20 ಅಂಕಗಳ ಜಿಗಿತವನ್ನು ಪಡೆದು 12,000 ಅಂಕಗಳ ಮಟ್ಟವನ್ನು ದಾಟಿತು.
ವಿದೇಶಿ ಬಂಡವಾಳದ ಒಳ ಹರಿವಿನಲ್ಲಿ ಆಗಿರುವ ಹೆಚ್ಚಳ ಮತ್ತು ದೇಶಿಯ ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಧನಾತ್ಮಕತೆಯಿಂದಾಗಿ ಇಂದು ಬ್ಯಾಂಕಿಂಗ್ ಮತ್ತು ಐಟಿ ಶೇರುಗಳು ಉತ್ತಮ ಮುನ್ನಡೆ ಕಂಡವು.
ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್ 220.36 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 40,052.33 ಅಂಕಗಳ ಮಟ್ಟದಲ್ಲೂ ನಿಫ್ಟಿ 69.50 ಅಂಕಗಳ ಏರಿಕೆಯೊಂದಿಗೆ 12,015.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನ ಟಾಪ್ ಗೇನರ್‌ಗಳಾದ ಏಶ್ಯನ್ ಪೇಂಟ್, ಕೋಲ್ ಇಂಡಿಯಾ, ಟಿಸಿಎಸ್, ಒಎನ್‌ಜಿಸಿ, ಎಚ್‌ಸಿಎಲ್ ಟೆಕ್, ಎಲ್ ಆ್ಯಂಡ್ ಟಿ, ಎಕ್ಸಿಸ್ ಬ್ಯಾಂಕ್, ಎಸ್‌ಬಿಐ ಇಂಡಸ್ ಇಂಡ್ ಬ್ಯಾಂಕ್ ಶೇರುಗಳು ಶೇ.3ರ ಏರಿಕೆಯನ್ನು ಕಂಡವು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗೆ 15 ಪೈಸೆಯ ಏರಿಕೆಯನ್ನು ಕ,ಡು 69.72 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಬ್ರೆಂಟ್ ಕಚ್ಚಾ ತೈಲ ಶೇ.1.04ರ ಇಳಿಕೆಯನ್ನು ಕಂಡು ಬ್ಯಾರಲ್‌ಗೆ 64.65 ಡಾಲರ್ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.