ಮುಂಬಯಿ : ಅಮೆರಿಕ ಮತ್ತು ಚೀನ ನಡುವೆ ವಾಣಿಜ್ಯ ವಹಿವಾಟು ಮತ್ತೆ ಕುದುರುವ ಆಶಾಭಾವನೆ ಮೂಡಿರುವ ಹಿನ್ನೆಲೆಯಲ್ಲಿ ಜಾಗತಿಕ ಶೇರು ಪೇಟೆಗಳಲ್ಲಿ ಧನಾತ್ಮಕತೆ ತೋರಿಬಂದಿದೆ.
ಇದನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿದೆ.
ಇಂದು ಬೆಳಗ್ಗೆ 11.00 ಗಂಟೆಯ ಸುಮಾರಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 122.71 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 38,807.43 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಕ 41.70 ಅಂಕಗಳ ಏರಿಕೆಯೊಂದಿಗೆ 11,639.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 12 ಪೈಸೆಗಳ ಏರಿಕೆಯನ್ನು ದಾಖಲಿಸಿ 69.05 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಮಾರುಕಟ್ಟೆಯಲ್ಲಿಂದು ಬೆಳಗ್ಗಿನ ವಹಿವಾಟಿನಲ್ಲಿ ಐಟಿಸಿ, ಟಾಟಾ ಮೋಟರ್, ಎಸ್ ಬ್ಯಾಂಕ್, ಮಾರುತಿ ಸುಜುಕಿ, ರಿಲಯನ್ಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಸಿಪ್ಲಾ, ಇಂಡಿಯಾ ಬುಲ್ಸ್ ಹೌಸಿಂಗ್, ಎಸ್ ಬ್ಯಾಂಕ್, ಅಲ್‌ಟ್ರಾ ಟೆಕ್ ಸಿಮೆಂಟ್, ಐಓಸಿ; ಟಾಪ್ ಲೂಸರ್‌ಗಳು : ಬ್ರಿಟಾನಿಯಾ, ಟಾಟಾ ಮೋಟರ್, ಎಸ್‌ಬಿಐ, ಝೀ ಎಂಟರ್‌ಟೇನ್‌ಮೆಂಟ್, ಎಚ್ ಯು ಎಲ್.