Advertisement

ಮುಂಬಯಿ ಶೇರು ಪೇಟೆ ನಿರಂತರ 2ನೇ ದಿನ ಕುಸಿತ : 355 ಅಂಕ ನಷ್ಟ

09:48 AM Mar 26, 2019 | Sathish malya |

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಭರಾಟೆಯ ಶೇರು ಮಾರಾಟ ಕಂಡು ಬಂದಿದ್ದು ಇದು ಜಾಗತಿಕ ಆರ್ಥಿಕ ಹಿನ್ನಡೆಯ ಸೂಚನೆ ಇದ್ದಿರಬಹುದೆಂಬ ಭಯದಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 355.70 ಅಂಕಗಳ ನಷ್ಟದೊಂದಿಗೆ 37,808.91 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

Advertisement

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 102.65 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 11,354.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಕಳೆದೆರಡು ದಿನಗಳಲ್ಲಿ ಸೆನ್ಸೆಕ್ಸ್‌ 575 ಅಂಕಗಳನ್ನು ಕಳೆದುಕೊಂಡಿದೆ. ಇಂದು ಹೆಚ್ಚಿನೆಲ್ಲ ಏಶ್ಯನ್‌ ಶೇರು ಪೇಟೆಗಳಲ್ಲಿ ಹಿನ್ನಡೆ ತೋರಿ ಬಂದಿದ್ದು ಐರೋಪ್ಯ ಶೇರು ಮಾರುಕಟ್ಟೆಗಳು ಕೂಡ ಇಂದಿನ ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿವೆ.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,869 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 792 ಶೇರುಗಳು ಮುನ್ನಡೆ ಸಾಧಿಸಿದವು; 1,884 ಶೇರುಗಳು ಹಿನ್ನಡೆಗೆ ಗುರಿಯಾದವು; 193 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next