ಮುಂಬಯಿ : ನಿರಂತರ ಮೂರನೇ ದಿನವೂ ನಷ್ಟದ ಹಾದಿಯಲ್ಲಿ ಸಾಗಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 289 ಅಂಕಗಳ ಕುಸಿತದೊಂದಿಗೆ 39,452.07 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 90.75 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,823.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಸೆನ್ಸೆಕ್ಸ್ ಇಂದಿನ ವಹಿವಾಟಿನಲ್ಲಿ ಒಮ್ಮೆ 400 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಕೊನೆಗೂ ಈ ನಷ್ಟವನ್ನು ಅದು 289 ಅಂಕಕ್ಕೆ ಇಳಿಸಿಕೊಂಡಿತು.
ಇಂದಿನ ಟಾಪ್ ಲೂಸರ್‌ಗಳ ಪೈಕಿ ಇಂಡಸ್ ಇಂಡ್ ಬ್ಯಾಂಕ್, ಭಾರ್ತಿ ಏರ್‌ಟೆಲ್, ಟಾಟಾ ಮೋಟರ್, ಎಕ್ಸಿಸ್ ಬ್ಯಾಂಕ್, ಕೋಟಕ್ ಬ್ಯಾಂಕ್, ಬಜಾಜ್ ಆಟೋ, ಎಸ್ ಬ್ಯಾಂಕ್, ಎಚ್ ಸಿ ಎಲ್ ಟೆಕ್, ಎಚ್ ಯು ಎಲ್ ಮತ್ತು ಹೀರೋ ಮೋಟೋ ಕಾರ್ಪ್ ಶೇರುಗಳು ಶೇ.4.36ರ ನಷ್ಟಕ್ಕೆ ಗುರಿಯಾದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,666 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 797 ಶೇರುಗಳು ಮುನ್ನಡೆ ಸಾಧಿಸಿದವು; 1,725 ಶೇರುಗಳು ಹಿನ್ನಡೆಗೆ ಗುರಿಯಾದವು; 144 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.