ಮುಂಬಯಿ : ದೇಶೀಯ ಹಣಕಾಸು ಸಂಸ್ಥೆಗಳು ಆಯ್ದ ಕ್ಷೇತ್ರಗಳ ಮುಂಚೂಣಿ ಶೇರುಗಳ ಖರೀದಿಯಲ್ಲಿ ಆಸಕ್ತಿ ತೋರಿದ ಪರಿಣಾಮವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 120 ಅಂಕಗಳ ಜಿಗಿತವನ್ನು ಸಾಧಿಸಿತು.
ಕಳೆದ ಐದು ದಿನಗಳ ವಹಿವಾಟಿನಲ್ಲಿ ನಿರಂತರ ಏರು ಹಾದಿಯಲ್ಲಿ ಸಾಗುತ್ತಿರುವ ಸೆನ್ಸೆಕ್ಸ್ ಒಟ್ಟಾರೆಯಾಗಿ 524.44 ಅಂಕಗಳನ್ನು ಸಂಪಾದಿಸಿರುವುದು ಗಮನಾರ್ಹವಾಗಿದೆ.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 133.44 ಅಂಕಗಳ ಮುನ್ನಡೆಯೊಂದಿಗೆ 32,319.85 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 41.60 ಅಂಕಗಳ ಮುನ್ನಡೆಯೊಂದಿಗೆ 10,120.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಬ್ಯಾಂಕ್ ನಿಫ್ಟಿ 134.50 ಅಂಕಗಳ ಉತ್ತಮ ಮುನ್ನಡೆಯನ್ನು ದಾಖಲಿಸಿತಾರೆ ನಿಫ್ಟಿ ಐಟಿ 18.70 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ಸನ್ ಫಾರ್ಮಾ, ಎಚ್‌ಡಿಎಫ್ಸಿ, ಎಕ್ಸಿಸ್ ಬ್ಯಾಂಕ್, ಬಿಪಿಸಿಎಲ್, ಇನ್‌ಫೋಸಿಸ್.
ನಿಫ್ಟಿ 50 ರ ಗೊಂಚಲಿನಲ್ಲಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ 35 ಶೇರುಗಳು ಮುನ್ನಡೆ ಸಾಧಿಸಿದರೆ 16 ಶೇರುಗಳು ಹಿನ್ನಡೆಗೆ ಗುರಿಯಾದವು.