Advertisement
ಸಭೆಯಲ್ಲಿ ನೂತನ ಮಠಾಧಿ ಪತಿಗಳಾಗಲಿರುವ ಶ್ರೀ ಸಚ್ಚಿದಾನಂದ ಭಾರತೀ, ಮಲ್ಲ ಶ್ರೀ ಕ್ಷೇತ್ರದ ಮೊಕ್ತೇಸರ ಆನೆಮಜಲು ವಿಷ್ಣು ಭಟ್, ಡಾ| ಬಿ.ಎಸ್. ರಾವ್, ವಿದ್ವಾನ್ ಪಂಜ ಭಾಸ್ಕರ ಭಟ್, ಪ್ರಕಾಶ್ ರೆಡ್ಡಿ ಬೆಂಗಳೂರು ಉಪಸ್ಥಿತರಿದ್ದರು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಹಾಗೂ ಸೂರ್ಯನಾರಾಯಣ ಎಡನೀರು ಸ್ವಾಗತಿಸಿ ಸಭೆ ನಿರ್ವಹಿಸಿದರು. ರಾಜೇಂದ್ರ ಕಲ್ಲೂರಾಯ ವಂದಿಸಿದರು.
ನೂತನ ಯತಿವರ್ಯರಾಗಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಪೀಠಾರೋಹಣ ಕಾರ್ಯಕ್ರಮವು ಅ. 1ರಂದು ಶ್ರೀ ಮಠದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಪೂರ್ವಭಾವಿಯಾಗಿ ಅ. 19ರಿಂದ ಕುಂಬಳೆ ಸೀಮೆಯ ನಾಲ್ಕು ಪ್ರಧಾನ ದೇವಾಲಯಗಳಲ್ಲಿ ಒಂದಾದ ಅಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಆರಂಭಗೊಳ್ಳುವ ಪುಣ್ಯ ಕ್ಷೇತ್ರಗಳ ಸಂದರ್ಶನವು ಕುಂಬಳೆ ಸೀಮೆಯ ಎಲ್ಲ ದೇವಾಲಯಗಳಿಗೂ ಭೇಟಿ ನೀಡಿ ಹೊರನಾಡು, ಹೊರ ರಾಜ್ಯಗಳ ಪುಣ್ಯ ಕ್ಷೇತ್ರಗಳನ್ನು ಸಂದರ್ಶಿಸಿ ಕಾಂಚಿ ಕಾಮಕೋಟಿ ಜಗದ್ಗುರು ಪೀಠದಲ್ಲಿ ಸಂಪನ್ನಗೊಳ್ಳಲಿದೆ. ಸೆ. 28ರಂದು ಕಾಂಚಿ ಕಾಮಕೋಟಿ ಜಗದ್ಗುರುಗಳಾದ ಶ್ರೀ ವಿಜಯೇಂದ್ರ ಸರಸ್ವತೀ ಶ್ರೀಗಳಿಂದ ಅಧಿಕೃತವಾಗಿ ಸನ್ಯಾಸ ದೀಕ್ಷೆ ಸ್ವೀಕರಿಸಿ ಮರಳುವ ಶ್ರೀ ಸಚ್ಚಿದಾನಂದತೀರ್ಥರ ಪುರಪ್ರವೇಶ ಹಾಗೂ ಪೀಠಾರೋಹಣ ಕಾರ್ಯಕ್ರಮ ಅ. 1 ರಂದು ನಡೆಯಲಿದೆ.