Advertisement
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ರಾಜ್ಯ ಸಹಕಾರ ಸೌಹಾರ್ದ ಮಹಾಮಂಡಲ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 67 ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡಲು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸಂಕಲ್ಪ ಮಾಡಿದ್ದಾರೆ ಇವರ ಬೇಡಿಕೆಗಳನ್ಮು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸ್ತು ಎನ್ನುತಾರೆ ಜಿಲ್ಲೆಯ ಪ್ರಮುಖ ಬೇಡಿಕೆಗಳಾದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿರುವ ಡಿಸಿಸಿ ಬ್ಯಾಂಕ್ ಹಾಗೂ ಕೋಚಿಮುಲ್ ಹಾಲು ಒಕ್ಕೂಟಗಳನ್ನು ಪ್ರತ್ಯೇಕಗೊಳಿಸುವ ವಿಚಾರ ರಾಜ್ಯ ಸಚಿವ ಸಂಪುಟದ ಮುಂದಿದೆ ಅದು ಅತಿ ಶೀಘ್ರದಲ್ಲಿ ಈಡೇರಲಿದೆ ಎಂದರು.
Related Articles
Advertisement
ಜಿಲ್ಲಾ ಒಕ್ಕೂಟದ ಕಟ್ಟಡವನ್ನು ನಿರ್ಮಿಸಲು ರಾಜ್ಯ ಸಹಕಾರ ಇಲಾಖೆಯಿಂದ ಅಗತ್ಯ ನೆರವು ಕಲ್ಪಿಸಲು ಬದ್ದವಾಗಿದ್ದು ಕಟ್ಟಡವನ್ನು ಮಾದರಿಯಾಗಿ ನಿರ್ಮಿಸಬೇಕೆಂದು ಸಲಹೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗಾಗಿ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಸಂಸದ ಬಿ.ಎನ್.ಬಚ್ಚೇಗೌಡ,ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು,ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಸಹಕಾರ ಇಲಾಖೆಯ ನಿಬಂಧಕರಾದ ಝೀಯಾಉಲ್ಲಾ, ಕೋಚಿಮುಲ್ ಅಧ್ಯಕ್ಷ ನಂಜೇಗೌಡ,ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ,ಉಪಾಧ್ಯಕ್ಷ ತೋಪಡ ನಾಗರಾಜ್, ಮಾಜಿ ಶಾಸಕ ಕೆಪಿ ಬಚ್ಚೇಗೌಡ,ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ (ಚಿನ್ನಿ) ಜಿಲ್ಲಾಧಿಕಾರಿ ಆರ್.ಲತಾ,ಜಿಲ್ಲಾ ಎಸ್ಪಿ ಮಿಥುನ್ ಕುಮಾರ್,ರಾಜ್ಯ ಸೌಹಾರ್ದ ಸಹಕಾರ ಮಂಡಳದ ಅಧ್ಯಕ್ಷ ಕೃಷ್ಣರೆಡ್ಡಿ,ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ಎನ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.