Advertisement

ಪ್ರತ್ಯೇಕ ಡಿಸಿಸಿ, ಹಾಲು ಒಕ್ಕೂಟ ಭರವಸೆ

06:41 AM Jun 10, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ) ಹಾಗೂ ಹಾಲು ಒಕ್ಕೂಟ ಕೋಲಾರ ಜಿಲ್ಲೆಯಿಂದ ವಿಭಜಿಸಿ ಜಿಲ್ಲೆಗೆ ಪ್ರತ್ಯೇಕ ಆಡಳಿತ ಮಂಡಳಿ ರಚನೆಗೆ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ  ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅಭಯ ನೀಡಿದರು.

Advertisement

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ, ಸಹಕಾರ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿ, ಜಿಲ್ಲೆಗೆ ಡಿಸಿಸಿ ಬ್ಯಾಂಕ್‌ಹಾಗೂ ಹಾಲು ಒಕ್ಕೂಟ ಸ್ಥಾಪನೆ ಸರ್ಕಾರದ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಎರಡು ಬೇಡಿಕೆಗಳು ಈಡೇರಲಿವೆ ಎಂದರು.

ಸಂಸದ  ಬಿ.ಎನ್‌.ಬಚ್ಚೇಗೌಡ ಮಾತನಾಡಿ, ಪ್ರಾಣದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿ ರುವ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ನೀಡುವ ನಿರ್ಧಾರ ಉತ್ತಮವಾ ದದ್ದು. ಆದರೆ ಇದನ್ನು ಪ್ರತಿ ತಿಂ ಗಳು ನೀಡುವ ಕಾರ್ಯ ಆಗಬೇಕೆಂದರು. ಸರ್ಕಾರ ತಾಯಿ ಹಾಗೂ ಮಗು ರಕ್ಷಣೆಗೆ ಒತ್ತು ಕೊಡುವ ಕೆಲಸ ಮಾಡುತ್ತಿದೆ. ಕೋವಿಡ್‌ 19 ತಡೆಗೆ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯ ಎಂದರು.

6 ಸಾವಿರ ಕೊಡಿ: ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ  ದಿನದ 24 ಗಂಟೆ ಕಾಲ ಸೇವೆ ಮಾಡುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ 3 ಸಾವಿರ ಪ್ರೋತ್ಸಾಹ ಧನದ ಜೊತೆಗೆ 3 ಸಾವಿರ ಸೇರಿ ಒಟ್ಟು 6,000 ರೂ. ನೀಡಬೇಕೆಂದು ಆಗ್ರಹಿಸಿದರು. ಇದಕ್ಕೆ ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ  ಸಹ ಧ್ವನಿಗೂಡಿಸಿ ಆಶಾ ಕಾರ್ಯಕರ್ತೆಯರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಅವರಿಗೆ ಹೆಚ್ಚಿನ ಪ್ರೋತ್ಸಾಹ ಧನ ಸಿಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಮಾತನಾಡಿದರು.  ವೇದಿಕೆಯಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್‌.ಲತಾ, ಎಸ್ಪಿ ಮಿಥುನ್‌ ಕುಮಾರ್‌, ಉಪ ವಿಭಾಗಾಧಿಕಾರಿ ರಘು ನಂದನ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ ರವಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

ಜಿಲ್ಲೆಯ 1,040 ಆಶಾ ಕಾರ್ಯಕರ್ತೆಯರಿಗೆ ನೆರವು: ಜಿಲ್ಲೆಯಲ್ಲಿ ಕೋವಿಡ್‌ 19 ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ಸುಮಾರು 1,040 ಮಂದಿ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 3 ಸಾವಿರ ರೂ. ಪ್ರೋತ್ಸಾಹ ಧನ  ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸಾಂಕೇತಿಕವಾಗಿ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ 177 ಮಂದಿ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಪ್ರೋತ್ಸಾಹ ಧನದ ಚೆಕ್‌ ವಿತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next