ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಚಾರದಲ್ಲಿ ನಿಗಾ ವಹಿಸಲು ಪ್ರತ್ಯೇಕ ಪಡೆ ರಚಿಸಲಾಗುವುದು. ಸ್ಥಳೀಯ ವಾಗಿ ದೂರುಗಳು ಬಂದರೆ ಅಲ್ಲಿನ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಗೋಲ್‌ಮಾಲ್ ಆಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಬುಧವಾರ ಕಂದಾಯ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಲೋಪವಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಪರಿಹಾರ ವಿತರಣೆ ವಿಚಾರದಲ್ಲಿ ನಿಗಾ ವಹಿಸಲು ಪ್ರತ್ಯೇಕ ಪಡೆ ರಚಿಸಲಾ ಗುವುದು. ಸ್ಥಳೀಯವಾಗಿ ದೂರುಗಳು ಬಂದರೆ ಅಲ್ಲಿನ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಯಾವುದೇ ಕಾರಣಕ್ಕೂ ಪರಿಹಾರ ವಿತರಣೆಯಲ್ಲಿ ವಿಳಂಬ ಆಗಬಾರದು, ಸಮಸ್ಯೆಯೂ ಆಗಬಾರದು. ಈ ಬಗ್ಗೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂತ್ರಸ್ತರ ಬ್ಯಾಂಕ್ ಖಾತೆಗೆ ಆದಷ್ಟೂ ನೇರವಾಗಿ ಪರಿಹಾರ ಜಮೆ ಮಾಡಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ತಾತ್ಕಾಲಿಕ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿ ಕೊಳ್ಳಬೇಕು ಎಂದು ತಿಳಿಸಿದರು.
118 ವರ್ಷಗಳಲ್ಲಿಯೇ ಅತಿ ಹೆಚ್ಚಿನ ಮಳೆ: ರಾಜ್ಯದಲ್ಲಿ ಪ್ರವಾಹದಿಂದ 32 ಸಾವಿರ ಕೋಟಿ ರೂ.ಮೊತ್ತದ ಹಾನಿಯಾ ಗಿ ರುವ ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗುವುದು. ರಾಜ್ಯದಲ್ಲಿ ಕಳೆದ ವರ್ಷಕ್ಕಿಂದ ಶೇ.12ರಷ್ಟು ಹೆಚ್ಚು ಮಳೆಯಾಗಿದೆ.
118 ವರ್ಷಗಳಲ್ಲಿ ಅತಿ ಹೆಚ್ಚಿನ ಮಳೆ ಇದು. 825 ಟಿಎಂಸಿ ನೀರು ನಮ್ಮ ರಾಜ್ಯದ ಜಲಾಶಯಗಳಲ್ಲಿ ಸಂಗ್ರಹವಾಗಿದೆ ಎಂದು ಹೇಳಿದರು. ಈಗ 60.09 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೂ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.