Advertisement
ಕಾಂಗ್ರೆಸ್ ಕಾರ್ಯಕರ್ತರ, ನಾಯಕರ ಮನೆಗಳಿಗೆ ದಾಳಿ ಮಾಡಿಸುವ ಮೂಲಕ ಐಟಿ ಸರ್ಜಿಕಲ್ ಸ್ಟ್ರೈಕ್ ಆರಂಭಿಸಿದೆ. ನ್ಯಾಯಸಮ್ಮತ ಚುನಾವಣೆ ನಡೆಯಲು ಚುನಾವಣ ಆಯೋಗ ಮಧ್ಯ ಪ್ರವೇಶಿಸಬೇಕು. ಈ ಕುರಿತು ವಿವರಣೆ ಪಡೆಯುವಂತೆ ರಾಷ್ಟ್ರಪತಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡ ಲಾಗುವುದು ಎಂದರು.
ದೇಶಾದ್ಯಂತ ಕಾಂಗ್ರೆಸ್ ನಾಯಕ ರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗು ತ್ತಿದೆ. ಬಿಜೆಪಿಗರು ಅಕ್ರಮ ಆಸ್ತಿ ಸಂಪಾದಿಸಿದ್ದರೂ ಅವರ ರಕ್ಷಣೆಯಲ್ಲಿ ಮೋದಿ
ಮತ್ತು ಅವರ ಹಿಂಬಾಲಕರು ನಿರತರಾಗಿದ್ದಾರೆ ಎಂದು ಐವನ್ ಆಕ್ರೋಶ ವ್ಯಕ್ತಪಡಿಸಿದರು. ನಾವು ದಾಳಿ ಮಾಡಬಾರ ದೆಂದು ಎಲ್ಲೂ ಹೇಳಿಲ್ಲ. ಆದರೆ ಕೇಂದ್ರ ಸರಕಾರವು ಚುನಾವಣೆ ಸಂದರ್ಭ ದಾಳಿ ನಡೆಸಿ ಐಟಿಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಜಿಲ್ಲೆಗೆ ರಾಹುಲ್
ದ.ಕ. ಲೋಕಸಭಾ ಕ್ಷೇತ್ರದ ಪ್ರಚಾರ ಬೆಳ್ತಂಗಡಿಯಿಂದಲೇ ಆರಂಭಗೊಳ್ಳ ಲಿದ್ದು, ಜಿಲ್ಲೆಗೆ ರಾಹುಲ್‌ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನೆ ಖರ್ಗೆ, ಗುಲಾಂ ನಬಿಅಜಾದ್, ಸಿದ್ದರಾಮಯ್ಯ ಮೊದಲಾದ ನಾಯಕರು ಪ್ರಚಾರ ಸ»ಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
Related Articles
ಕಾಂಗ್ರೆಸ್ ಪಕ್ಷ ದ.ಕ. ಜಿಲ್ಲೆಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಈ ನಡುವೆ ಬೆಳ್ತಂಗಡಿ ತಾಲೂಕಿಗೆ ಶಾಶ್ವತ ಯೋಜನೆ ತರುವ ನಿಟ್ಟಿನಲ್ಲಿ ಪ್ರಣಾಳಿಕೆಯಲ್ಲಿ ಸೇರಿಸುವ ಕುರಿತು ಸೋಮವಾರ ಪ್ರಮುಖರ ಸಭೆ ಕರೆಯಲಾಗಿದೆ ಎಂದರು.
Advertisement