Advertisement

ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಪ್ರತ್ಯೇಕ ನೀತಿ: ಉಮಾಶ್ರೀ 

07:05 AM Sep 15, 2017 | |

ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

Advertisement

ವಿಕಾಸಸೌಧದಲ್ಲಿ ಗುರುವಾರ ಆಯೋಜಿಸಿದ್ದ “ಮಕ್ಕಳ ಹಕ್ಕುಗಳ ಕುರಿತ ಶಾಸಕರ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿ, ಹೆಣ್ಣು ಸ್ವಾವಲಂಬಿಯಾದರೆ ಕುಟುಂಬ ಸದೃಢವಾಗುತ್ತದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ, ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು. ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿಯಾಗಲು ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದೆ. ಇದು ಜಾರಿಯಾದರೆ ಬಾಲ್ಯ ವಿವಾಹ ಅಪರಾಧಕ್ಕೆ ಎರಡು ವರ್ಷ ಕಠಿಣ ಸಜೆ ವಿಧಿಸಲಾಗುತ್ತದೆ ಜತೆಗೆ ನಿಧಿಗಾಗಿ ಮಕ್ಕಳ ಬಲಿ, ಹರಕೆ ಅಮಾನವೀಯ ಆಚರಣೆಗಳು ನಿಲ್ಲಲಿವೆ. ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುವಂತಹ ಅನಿಷ್ಠಗಳನ್ನು ತಡೆಯಲು ಪ್ರಬಲವಾದ ಕಾಯ್ದೆ ಅಗತ್ಯವಿದೆ. ರಾಜ್ಯ ಸರ್ಕಾರ ಮೌಡ್ಯ ನಿಷೇಧಕ್ಕೆ ಬದ್ಧವಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next