Advertisement

ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತ್ಯೇಕ ಪ್ರತಿಭಟನೆ

12:49 PM Feb 17, 2018 | |

ಮೈಸೂರು: ತಾಲೂಕಿನ ಆನಂದೂರು ಗ್ರಾಮದ ರೈತರಿಗೆ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆವಹಿಸಬೇಕೆಂದು ಆಗ್ರಹಿಸಿ ರೈತ ಸಂಘಟನೆ ಹಾಗೂ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

Advertisement

ಎಲ್ಲರಿಗೂ ಜಮೀನು ನೀಡಿ: ಮೈಸೂರು ತಾಲೂಕು ಆನಂದೂರು ಗ್ರಾಮದ ರೈತರಿಗೆ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇಲವಾಲದಲ್ಲಿರುವ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮೈಸೂರು ತಾಲೂಕಿನ ಆನಂದೂರು ಸರ್ವೆ ನಂ.35, ಯಡಹಳ್ಳಿ ಗ್ರಾಮದ ಸರ್ವೆ ನಂ.22 ಮತ್ತು ಕಲ್ಲೂರು ನಾಗನಹಳ್ಳಿ ಕಾವಲ್‌ ಗ್ರಾಮದ ಸರ್ವೆ ನಂ.20, 21, 22 ಹಾಗೂ 23ರ ಜಮೀನುನಿಗೆ ಅರ್ಜಿ ಸಲ್ಲಿಸಿದ್ದ ರೈತರಿಗೆ ಜಮೀನು ಮಂಜೂರು ಮಾಡದೆ ನಾಲ್ಕರಿಗೆ ಮಾತ್ರ ಜಮೀನು ಮಂಜೂರು ಮಾಡಲಾಗಿದೆ.

ಇದರಿಂದ ಜಮೀನಿಗೆ ಅರ್ಜಿ ಸಲ್ಲಿಸಿದ್ದ ಉಳಿದ ರೈತರಿಗೆ ಅನ್ಯಾಯವಾಗಿದ್ದು, ಈ ರೈತರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟದ್ದು, ಈ ಹಿನ್ನೆಲೆ ಕಳೆದ ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಎಲ್ಲಾ ರೈತರಿಗೂ ಸಮಾನವಾಗಿ ಹಂಚಿಕೆ ಮಾಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ಪಿ.ಮರಂಕಯ್ಯ, ಸಂಘಟನಾ ಕಾರ್ಯದರ್ಶಿ ವಿಜಯೇಂದ್ರ, ಮಹೇಶ್‌, ಪ್ರಬಾಕರ್‌, ಕುಮಾರ್‌, ಬಸವರಾಜು, ನಾಗರಾಜ್‌, ಅಶ್ವಥ್‌ ನಾರಾಯಣ ಇನ್ನಿತರರು ಭಾಗವಹಿಸಿದ್ದರು.

ಸಹಿ ಸಂಗ್ರಹ ಚಳವಳಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಹಗರಣಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಮುಕ್ತ ವಿವಿ ಎದುರು ಸಹಿ ಸಂಗ್ರಹ ಚಳವಳಿ ನಡೆಸಿದರು. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಅವಧಿಯಲ್ಲಿ ಮುಕ್ತ ವಿವಿಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿದ್ದು,

Advertisement

ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ಸಹಿ ಸಂಗ್ರಹ ಚಳವಳಿ ನಡೆಸಲಾಗುತ್ತಿದೆ  ಎಂದು ಯುವ ವೇದಿಕೆ ರಾಜಾಧ್ಯಕ್ಷ ಮೋಹಿತ್‌ಗೌಡ ತಿಳಿಸಿದರು. ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್‌.ಭಗವಾನ್‌, ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾಂ, ಗೋಪಾಲ್‌, ಪದಾಧಿಕಾರಿಗಳಾದ ಶ್ರೀಕಾಂತ್‌, ಶಿವು, ಹರೀಶ್‌ಗೌಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next