Advertisement

ಪದವಿ ವಿದ್ಯಾರ್ಥಿಗಳಿಂದ ಪ್ರತ್ಯೇಕ ಪ್ರತಿಭಟನೆ

04:43 PM Oct 19, 2019 | Suhan S |

ಮಾಲೂರು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾವಿಭಾಗ ಮತ್ತು ಬಿಎಸ್‌ಡ್ಲ್ಯೂ ವಿಭಾಗದ ವಿದ್ಯಾರ್ಥಿಗಳು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

Advertisement

ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಮುಖಂಡ ಬಾಲಕೃಷ್ಣ ನೇತೃತ್ವದಲ್ಲಿ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲ ಕೇಶವರೆಡ್ಡಿ, ಕಲಾ ವಿಭಾಗದ ವಿದ್ಯಾರ್ಥಿಗಳನ್ನು ಕೀಳುಮಟ್ಟದಲ್ಲಿ ಕಾಣುತ್ತಿರುವುದರ ಜೊತೆಗೆ ಮಾಲೂರು ಪಟ್ಟಣದಲ್ಲಿನ ಹಳೇ ಕಟ್ಟಡಕ್ಕೆ ಕಲಾವಿಭಾಗದ ತರಗತಿ ವರ್ಗಾಯಿಸಿದ್ದಾರೆ. ಇಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲ ಎಂದು ದೂರಿದರು.

ಯುಜಿಸಿ ಅನುದಾನ ಕೇವಲ ವಾಣಿಜ್ಯಶಾಸ್ತ್ರ ಮತ್ತು ಇತರೆ ವಿಭಾಗಕ್ಕೆ ಮಾತ್ರ ಸೀಮಿತ ಮಾಡಲಾಗುತ್ತಿದೆ. ಅನುದಾನವೂ ದುರುಪಯೋಗ ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ. ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಮವಸ್ತ್ರ ಮಾಡಿದ್ದು ಸರಿಯಲ್ಲ. ಕಲಾ ವಿಭಾಗದ ವಿದ್ಯಾರ್ಥಿಗಳನ್ನು ಕೀಳುಮಟ್ಟದಲ್ಲಿ ಗುರುತಿಸುವ ಕೆಲಸ ಮಾಡುತ್ತಿರುವ ಪ್ರಾಂಶುಪಾಲರ ನಡೆ ಸರಿಯಲ್ಲ ಎಂದರು.

ಈ ಕೂಡಲೇ ಬೆಂಗಳೂರು ಉತ್ತರ ವಿವಿಯ ಅಡಳಿತ ಮಂಡಳಿಯು ಮಾಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಅಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ಹೋಗಲಾಡಿಸಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಜೊತೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಎಸ್‌. ಎಂ.ವೆಂಕಟೇಶ್‌ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next