Advertisement
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಸಹಾಯಕ ಕಾ.ನಿ. ಎಂಜಿನಿಯರ್, ಕಿ.ಸ. ಎಂಜಿನಿಯರ್, ಪಂ. ಅಭಿವೃದ್ಧಿ ಅಧಿಕಾರಿಗಳು ಹಾಗೂ ತಳಮಟ್ಟದ ಸಿಬಂದಿ ಒಳ ಗೊಂಡ ತಂಡ ರಚಿಸಲಾಗಿದೆ. ಆಯಾ ಗ್ರಾ.ಪಂ. ವ್ಯಾಪ್ತಿಯ ಕುಡಿ ಯುವ ನೀರಿನ ಸ್ಥಿತಿಗತಿಗಳನ್ನು ಅವ ಲೋಕಿಸಲಾಗುತ್ತಿದೆ ಎಂದರು.
Related Articles
ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳಿYಚ್ಚು ಹಾಗೂ ಇತರ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯ ಮಾಡುತ್ತಿದ್ದು, ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್‌ಗಳನ್ನು ಒದಗಿಸಲು ಕೈಜೋಡಿಸುವಂತೆ ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
Advertisement
ಔಷಧ ದಾಸ್ತಾನಿಗೆ ಸೂಚನೆಅಕಾಲಿಕ ಮಳೆ ಎದುರಾದಲ್ಲಿ ಅಗತ್ಯ ಔಷಧಗಳನ್ನು ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನಿರಿಸಿಕೊಳ್ಳಬೇಕು ಹಾಗೂ ಬಿಸಿಗಾಳಿ ಬೀಸುವ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮುನ್ನೆಚ್ಚರಿಕೆ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಗೋಶಾಲೆಗಳಲ್ಲಿ ನೀರು ಹಾಗೂ ಮೇವು ಕಡಿಮೆಯಾಗದಂತೆ ಎಚ್ಚರ ವಹಿಸಬೇಕು ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗೆ ನಿರ್ದೇಶನ ನೀಡಿದರು.ಪಾಲಿಕೆ ಆಯುಕ್ತ ಚೆನ್ನಬಸಪ್ಪ ವೇದಿಕೆಯಲ್ಲಿದ್ದರು. ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಭರತ್ ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಮಂಗಳೂರು ಪಾಲಿಕೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ವಾರ್ಡ್ ಮಟ್ಟದಲ್ಲಿ ಕ್ರಮ: ಡಿಸಿ
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾತನಾಡಿ, ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ತುಂಬೆ ಅಣೆಕಟ್ಟಿನಲ್ಲಿ ನೀರು ಕಡಿಮೆ ಮಟ್ಟ ತಲುಪಿದಲ್ಲಿ ದಿನ ಬಿಟ್ಟು ದಿನ ನೀರು ಪೂರೈಕೆ ಹಾಗೂ ಕನಿಷ್ಠ 3ರಿಂದ 4 ತಾಸು ನೀರು ಪೂರೈಕೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಮೂಲ್ಕಿಯಲ್ಲಿ 10, ಮೂಡುಬಿದಿರೆಯಲ್ಲಿ 2 ಹಾಗೂ ಸೋಮೇಶ್ವರದಲ್ಲಿ 4 ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ ಎಂದು ಅಧಿಕಾರಿ ಸಭೆಗೆ ತಿಳಿಸಿದರು. ಸಮಸ್ಯೆ ಎದುರಾದಲ್ಲಿ ಹೊಸ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.