Advertisement

ನೆಗಡಿ, ಕೆಮ್ಮು, ಶೀತ ಇರುವವರಿಗೆ ಪ್ರತ್ಯೇಕ ಚಿಕಿತ್ಸೆ

03:10 PM Apr 09, 2020 | Suhan S |

ಶಿಡ್ಲಘಟ್ಟ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹರಡದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕವಾಗಿ ಜನಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ನಾಗರಿಕರು ಮನೆಯಲ್ಲಿದ್ದು ಸಹಕರಿಸಬೇಕೆಂದು ಜಿಪಂ ಸಿಇಒ ಫೌಝೀಯಾ ತರುನ್ನುಮ್‌ ಮನವಿ ಮಾಡಿದರು.

Advertisement

ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಗ್ರಾಮಗಳಲ್ಲಿ ಕೊರೊನಾ ಕಾರ್ಯಪಡೆ ರಚಿಸಿ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಪ್ರತ್ಯೇಕ ಚಿಕಿತ್ಸೆಗೆ ಸೂಚನೆ: ಶಿಡ್ಲಘಟ್ಟ ತಾಲೂಕಿನಲ್ಲಿ ಜ್ವರ-  ನೆಗಡಿ ಅಥವಾ ಕೆಮ್ಮು ಇರುವ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡ ಬೇಕೆಂದು ಸೂಚಿಸಿದ ಅವರು, ಆಸ್ಪತ್ರೆ ಯನ್ನು ಸ್ವತ್ಛವಾಗಿಟ್ಟುಕೊಂಡು ರೋಗಿಗಳು ಹೊರತುಪಡಿಸಿ ಬೇರೆಯವರೆಗೆ ಆಸ್ಪತ್ರೆಯಲ್ಲಿ ಇರಲು ಅವಕಾಶ ಕಲ್ಪಿಸಬಾರದು. ಕೊರೊನಾ ಸೋಂಕು ಹೇಗೆ ಹರಡುತ್ತದೆ ಎಂಬು ದರ ಕುರಿತು ಅರಿವು ಮೂಡಿಸುವ ಫ‌ಲಕ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 13 ಮಂದಿಗೆ ಡಯಾಲಿಸಿಸ್‌ ಮಾಡಲಾ ಗುತ್ತದೆ. ಆಸ್ಪತ್ರೆಯಲ್ಲಿ ನೀರಿನ ಅಭಾವ ಹೆಚ್ಚಾ ಗಿದ್ದು, ಟ್ಯಾಂಕರ್‌ ಮೂಲಕ ಸಮಸ್ಯೆ ನೀಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಮಾಹಿತಿ ನೀಡಿದರು.

ಆಸ್ಪತ್ರೆಯಲ್ಲಿ ಖಾಲಿಯಿರುವ ಪಿಝೀಷಿಯನ್‌ ಇನ್ನಿತರೆ ತಜ್ಞರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದರು. ಇದೇ ವೇಳೆಯಲ್ಲಿ ಆಸ್ಪ ತ್ರೆಯ ಎಲ್ಲಾ ವಾರ್ಡ್‌, ಟ್ರಾಮಾಕೇರ್‌ ಘಟಕ ಪರಿ ಶೀಲಿಸಿ ಸ್ವತ್ಛತೆ ಕಾಪಾಡಿಕೊಳ್ಳಬೇಕೆಂದು ತಾಕೀತು ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next