Advertisement

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

11:53 AM Sep 23, 2024 | Team Udayavani |

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸೋಮ ವಾರ(ಸೆ.23) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ.

Advertisement

ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ,
ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ.

ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್‌ ಘೋಷಿಸಿದೆ. ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬ ಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಉತ್ತಮಮಳೆ
ಮಂಗಳವಾರ(ಸೆ.24) ಬೆಳಗ್ಗೆವರೆಗಿನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ
ಕೆಲವು ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದರೆ, ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next