Advertisement
ಕೊಲ್ಲೂರು ದೇವಸ್ಥಾನಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಶನಿವಾರ ಮತ್ತು ರವಿವಾರ ತಲಾ 30,000ದಷ್ಟು ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದರು. ಬೆಳಗ್ಗಿನ ಜಾವದಿಂದ ಸಂಜೆಯ ತನಕವೂ ಭಕ್ತರ ಸರದಿ ಸಾಲು ಮುಖ್ಯ ರಸ್ತೆ ವರೆಗೆ ಇತ್ತು. ನೂಕುನುಗ್ಗಲು ತಪ್ಪಿಸಲು ಸಿಬಂದಿ ಹರ ಸಾಹಸ ಪಡಬೇಕಾಯಿತು.
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿ ಮತ್ತು ಸಹಸ್ರನಾಳಿಕೇರ ಗಣಪತಿ ಯಾಗವು ರವಿವಾರ ಜರಗಿದ್ದು, 30 ಸಾವಿರಕ್ಕೂ ಅಧಿಕ ಭಕ್ತರು ಶ್ರೀದೇವರ ದರ್ಶನ ಪಡೆದರು.
Related Articles
ಸುಬ್ರಹ್ಮಣ್ಯ: ಶನಿವಾರ, ರವಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಮಾರಧಾರಾ ಸ್ನಾನಘಟ್ಟ, ಸುಬ್ರಹ್ಮಣ್ಯ ಪೇಟೆ, ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರ ದಟ್ಟಣೆ ಕಂಡುಬಂದಿದ್ದು, ದೇವಸ್ಥಾನದ ವತಿಯಿಂದ ಪೂರಕ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ, ಕಟೀಲು, ಉಡುಪಿ ಶ್ರೀಕೃಷ್ಣ ಮಠ ಮೊದಲಾದ ಕ್ಷೇತ್ರಗಳಲ್ಲೂ ಸಾಮಾನ್ಯ ದಿನಕ್ಕಿಂತ ದುಪ್ಪಟ್ಟು ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ.
Advertisement