ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44ರ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಬೈಕ್‍ಗೆ ಢಿಕ್ಕಿ ಹೊಡೆದು ಹೋಟೆಲ್‍ನತ್ತ ನುಗ್ಗಿ ಬೈಕ್ ಸವಾರ ಹಾಗೂ ಹೋಟೆಲ್ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹೋಗಿ ಕ್ಯಾಂಟರ್ ಮೊದಲು ಬೈಕ್ ಸವಾರನಿಗೆ ಢಿಕ್ಕಿ ಹೊಡೆದು ಬಳಿಕ ಹೋಟೆಲ್ ಮುಂಭಾಗ ಪಾರ್ಕಿಂಗ್ ನಲ್ಲಿದ್ದ 5 ಕಾರುಗಳಿಗೆ ಢಿಕ್ಕಿ ಹೊಡೆದಿದೆ ಹೋಟೆಲ್ ಬಳಿ ಇದ್ದ ಗರ್ಭಿಣಿ ಮಹಿಳೆ, ಸೆಕ್ಯೂರಿಟಿ ಗಾರ್ಡ್, ಹಿರಿಯ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ರಾಮದೇವರಗುಡಿ ಬಳಿಯ ಪ್ರಣವ್ ಹೋಟೆಲ್ ಮುಂಭಾಗ ಈ ದುರಂತ ಸಂಭವಿಸಿದ್ದು ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಈ ಸಂಬಂಧ ಪೆರೆಸಂದ್ರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕ್ಯಾಂಟರ್ ಚಾಲಕನನ್ನು ಬಂಧಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನೆಯಲ್ಲಿ ಬೈಕ್ ಸವಾರ ಟಿ.ಚೊಕ್ಕನಹಳ್ಳಿ ಜನಾರ್ಧನ್ ಹಾಗೂ ಹೋಟಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಮೃತಪಟ್ಟಿದ್ದಾರೆ ಮಾನಸ ಮತ್ತು ಅವರ ತಂದೆ ನರಸಿಂಹ ಇಬ್ಬರು ತೀವ್ರ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆಯೆಂದು ಪರೆಸಂದ್ರ ಪೊಲೀಸ್ ಠಾಣೆಯ ಪಿಎಸ್‍ಐ ಮಂಜುನಾಥ್ ತಿಳಿಸಿದ್ದಾರೆ.
ನಿನ್ನೆಯಷ್ಟೆ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಕ್ಯಾಂಟರ್ ಢಿಕ್ಕಿ ಹೊಡೆದು ಇಬ್ಬರು ಪ್ರಾಣ ಕಳೆದುಕೊಳ್ಳುವಂತಾಗಿದೆ.
ಇದನ್ನೂ ಓದಿ : ಭುವನೇಶ್ವರದಲ್ಲಿ ಜನರ ನಿದ್ದೆಗೆಡಿಸಿದ ಕರಿ ಬೆಕ್ಕು : 25 ಜನರ ಮೇಲೆ ದಾಳಿ, ಶೋಧ ಕಾರ್ಯ…