Advertisement

ಸರಣಿ ಅಪಘಾತ: ಮೂವರಿಗೆ ಗಾಯ

04:44 PM Dec 13, 2018 | |

ಗುಂಡ್ಲುಪೇಟೆ: ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ಸಾಗುತ್ತಿದ್ದ ವಾಹನಗಳ ಸರಣಿ ಅಪಘಾತ ದಲ್ಲಿ ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಸುಣ್ಣದ ತಿಳಿಯ ಮೂಟೆಗಳನ್ನು ತುಂಬಿದ ಟಾಟಾ ಏಸ್‌ ವಾಹನ ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಇದರಿಂದ ಲಾರಿಯು ರಸ್ತೆ ಬದಿಗೆ ಸರಿದು ಮಾರ್ಗದಲ್ಲಿ ಸಾಗುತ್ತಿದ್ದ ಇನ್ನೆರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

Advertisement

 ಈ ಸರಣಿ ಅಪಘಾತದಿಂದ ಮೂವರು ಗಾಯ ಗೊಂಡಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು ಘಟನೆಯಲ್ಲಿ ಟಾಟಾ ಏಸ್‌ ವಾಹನ ಮತ್ತು ಕಾರಿನಲ್ಲಿದ್ದ ಇಬ್ಬರು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕೊಟ್ಟರು. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next