Advertisement

ಪಂಪ್‌ವೆಲ್ನಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

02:38 AM Jul 10, 2019 | Team Udayavani |

ಮಂಗಳೂರು: ನಗರದ ಪಂಪ್‌ವೆಲ್ ವೃತ್ತದ ಬಳಿ ಮಂಗಳವಾರ ಮಧ್ಯಾಹ್ನ ಕಾರಿಗೆ ಲಾರಿ ಢಿಕ್ಕಿ ಹೊಡೆದು ಸರಣಿ ಅಪಘಾತ ನಡೆದ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಪಾಯದಿಂದ ಪಾರಾಗಿದ್ದಾರೆ.

Advertisement

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಂತೂರು ಕಡೆಯಿಂದ ಪಂಪ್‌ವೆಲ್ ಕಡೆಗೆ ಅತಿ ವೇಗದಿಂದ ಸಾಗಿಬಂದ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಕಾರನ್ನು ಓವರ್‌ ಟೇಕ್‌ ಮಾಡಲು ಯತ್ನಿಸಿದ್ದು ಈ ವೇಳೆ ಕಾರಿಗೆ ಢಿಕ್ಕಿಯಾಗಿದೆ. ಕಾರು ಎದುರಿನಿಂದ ಹೋಗುತ್ತಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಒಟ್ಟು ಮೂರು ಕಾರುಗಳು ನಜ್ಜುಗುಜ್ಜಾಗಿವೆೆ. ಲಾರಿಯ ಎದುರು ಭಾಗ ಜಖಂಗೊಂಡಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭ ಸುಮಾರು ಅರ್ಧ ತಾಸು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು ಸ್ಥಳೀಯರು ಹಾಗೂ ಪೊಲೀಸರು ಅಪಘಾತಕ್ಕೀಡಾದ ಕಾರುಗಳನ್ನು ಬದಿಗೆ ಸರಿಸಿ, ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕದ್ರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next