ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಡಿಸೆಂಬರ್
ತಿಂಗಳಲ್ಲಿ ಅಂದಾಜು 70 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿಗೆ ಭೇಟಿ ನೀಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಹೆಚ್ಚು ಸರಣಿ ರಜೆಗಳು ಬಂದಿದ್ದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಆಗಮಿಸಿ, ಪ್ರಮುಖ ಸ್ಮಾರಕ ಕಣ್ತುಂಬಿಕೊಂಡಿದ್ದಾರೆ.
Advertisement
ಕರ್ನಾಟಕ, ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳ ಸೇರಿದಂತೆ ಮಹಾರಾಷ್ಟ್ರದಿಂದ ಅತಿ ಪ್ರವಾಸಿಗರು ಹಂಪಿಗೆ ಭೇಟಿ ನೀಡಿದ್ದಾರೆ. 69124 ದೇಶಿ ಪ್ರವಾಸಿಗರು ಭೇಟಿ ನೀಡಿದರೆ, 1636 ವಿದೇಶಿ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಇಲಾಖೆಗಳು ಸಂಪೂರ್ಣ ವಿಫಲವಾಗಿವೆ ಎಂಬ ದೂರುಗಳು ಕೇಳಿ ಬಂದಿವೆ. ಕ್ರಿಸಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ಹಂಪಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕಾಗಿ ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.