Advertisement

ಕೇಂದ್ರಕ್ಕೆ 2 ಕೋಟಿ ಕೋವಿಶೀಲ್ಡ್ ಡೋಸ್‌ಗಳನ್ನು ಉಚಿತವಾಗಿ ನೀಡಲಿರುವ ಸೀರಮ್ ಇನ್‌ಸ್ಟಿಟ್ಯೂಟ್

09:38 PM Dec 28, 2022 | Team Udayavani |

ನವದೆಹಲಿ : ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಎರಡು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಉಚಿತವಾಗಿ ನೀಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

Advertisement

ಅಧಿಕೃತ ಮೂಲಗಳ ಪ್ರಕಾರ, ಸೀರಮ್ ಇನ್‌ಸ್ಟಿಟ್ಯೂಟ್‌ನ ಸರ್ಕಾರಿ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು 410 ಕೋಟಿ ರೂ. ಮೌಲ್ಯದ ಡೋಸ್‌ಗಳನ್ನು ಉಚಿತವಾಗಿ ನೀಡುವುದಾಗಿ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿತರಣೆಯನ್ನು ಹೇಗೆ ಮಾಡಬಹುದು ಎಂದು ಸಿಂಗ್ ಸಚಿವಾಲಯದಿಂದ ಕೇಳಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮಕ್ಕಾಗಿ SII ಇದುವರೆಗೆ 170 ಕೋಟಿಗೂ ಹೆಚ್ಚು ಕೋವಿಶೀಲ್ಡ್‌ಗಳನ್ನು ಸರ್ಕಾರಕ್ಕೆ ಒದಗಿಸಿದೆ.

ಚೀನ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ, ಸರ್ಕಾರವು ಎಚ್ಚರಿಕೆಯನ್ನು ನೀಡಿದೆ ಮತ್ತು ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದೆ. ಭಾರತವು ತನ್ನ ಕಣ್ಗಾವಲು ಮತ್ತು ಕೋವಿಡ್ ಪಾಸಿಟಿವ್ ಸ್ಯಾಂಪಲ್‌ಗಳ ಜೀನೋಮ್ ಸೀಕ್ವೆನ್ಸಿಂಗ್‌ ನತ್ತ ಹೆಜ್ಜೆ ಹಾಕಿದೆ.

ಜನವರಿಯಲ್ಲಿ ಭಾರತವು ಕೋವಿಡ್ ಉಲ್ಬಣವನ್ನು ನೋಡಬಹುದಾದ್ದರಿಂದ ಮುಂದಿನ 40 ದಿನಗಳು ನಿರ್ಣಾಯಕ ಎಂದು ಅಧಿಕೃತ ಮೂಲಗಳು ಬುಧವಾರ ಎಚ್ಚರಿಸಿವೆ. ಅಲೆ ಎದ್ದರೂ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next