Advertisement

ಅರ್‌ಟಿಇಗೆ ಸರ್ವರ್‌ ತೊಡಕು

12:30 AM Mar 21, 2019 | |

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ ಲಭ್ಯವಿರುವ ಆರ್‌ಟಿಇ ಕೋಟಾದ ಕೆಲವೇ ಕೆಲವು ಸೀಟುಗಳಿಗೆ ಅರ್ಜಿ ಸಲ್ಲಿಸಲು ಮೊದಲ ದಿನವೇ ಪಾಲಕರು ಪರದಾಟ ನಡೆಸಿದ್ದಾರೆ.

Advertisement

ಸಾರ್ವಜನಿಕ ಶಿಕ್ಷಣ ಇಲಾಖೆಯು ಸಿದಟಛಿಪಡಿಸಿರುವ ಆರ್‌ಟಿಇ-2019ರ ವೆಬ್‌ಸೈಟ್‌ನಲ್ಲಿ ಬುಧವಾರದಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿತ್ತು. ಬೆಳಗ್ಗೆ ಬಹುತೇಕ ಕಡೆಗಳಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಮಧ್ಯಾಹ್ನ ಆಗುತ್ತಿದ್ದಂತೆ ಸರ್ವರ್‌ ಸಮಸ್ಯೆಯಿಂದ ಅನೇಕರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಮಾಹಿತಿ ಅಪ್‌ಲೋಡ್‌ ಮಾಡಿದ ನಂತರ ಸರ್ವರ್‌ ಡೌನ್‌ ಆಗಿರುವುದು ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಸಮಸ್ಯೆ ಎದುರಾಗಿದೆ. ಜಿಲ್ಲಾ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಅಟೆಲ್‌ ಜನಸ್ನೇಹಿ
ಕೇಂದ್ರ ಸೇರಿದಂತೆ ಅರ್ಜಿ ಸಲ್ಲಿಸಲು ತೊಂದರೆ ಯಾಗಿತ್ತು ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next