Advertisement

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

01:49 AM Dec 24, 2024 | Team Udayavani |

ಬೆಂಗಳೂರು: ಕಾಂಗ್ರೆಸ್ಸಿನವರು ಬಿಡುಗಡೆ ಮಾಡಿದ ವೀಡಿಯೋಗೆ ಯಾವುದೇ ಬೆಲೆ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವ ವೀಡಿಯೋ ದಾಖಲೆ ನಮ್ಮ ಬಳಿ ಇಲ್ಲ ಎಂದಿದ್ದಾರೆ. ಈಗ ಕಾಂಗ್ರೆಸ್‌ನವರು ಬಿಡುಗಡೆ ಮಾಡಿದ ವೀಡಿಯೋಗೆ ಯಾವುದೇ ಆಧಾರ ಇಲ್ಲ, ಬೆಲೆಯೂ ಇಲ್ಲ ಎಂದು ತಿಳಿಸಿದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಹೇಳಿದ್ದಕ್ಕೆ ಮಾತ್ರ ಬೆಲೆ ಇದೆ. ಹೈಕೋರ್ಟ್‌ ಕೂಡಲೇ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲು ಹೇಳಿರುವುದರಲ್ಲಿ ನಮಗೆ ಅರ್ಧ ಜಯ ಲಭಿಸಿದೆ. ಸಿ.ಟಿ. ರವಿ ಅವರನ್ನು ಇಷ್ಟೆಲ್ಲ ಓಡಾಡಿಸಿದ್ದು ಯಾಕೆ? ಕಾಡಿನಲ್ಲಿ, ಕ್ರಷರ್‌ ಹೊಂಡದಲ್ಲಿ, ಕಬ್ಬಿನ ಗದ್ದೆಯಲ್ಲಿ, ಧಾರವಾಡ, ಗದಗ, ಚಿಕ್ಕೋಡಿ ಜಿಲ್ಲೆ , ಬಾಗಲಕೋಟೆ ಜಿಲ್ಲೆ  ಗಡಿ ಭಾಗ, ಈ ಥರ ನಾಲ್ಕೈದು ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ರಾತ್ರಿಯೆಲ್ಲ ಊಟ, ನೀರು ನೀಡದೆ, ನಿದ್ದೆ ಇಲ್ಲದಂತೆ ವಿಚಿತ್ರವಾಗಿ ಹಿಂಸೆ ಕೊಟ್ಟಿದ್ದಾರೆ. ತಲೆಗೆ ಪೆಟ್ಟಾದರೂ ಚಿಕಿತ್ಸೆ ನೀಡಿಲ್ಲ. ಯಾಕೆ ನೀವು ಈ ತರಹ ಚಿತ್ರಹಿಂಸೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.

ಸಿ.ಟಿ. ರವಿ ಅವರ ಮೇಲೆ ಹಲ್ಲೆ  ಮಾಡಲು ನೂರಾರು ಜನರು ಸುವರ್ಣಸೌಧದ ಒಳಗೆ ಹೇಗೆ ಬಂದರು? ಒಳಗಡೆ ಬರಲು ಕಾರಣ ಯಾರು? ಯಾರ ಪತ್ರದೊಂದಿಗೆ ಒಳಗಡೆ ಬಂದಿದ್ದಾರೆ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next