Advertisement

ಡಿ.3ರಿಂದ ಬೆಳಗಾವಿಯಲ್ಲಿ ಅಧಿವೇಶನ? 

09:37 AM Oct 12, 2018 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ಡಿ.3 ರಿಂದ 10 ದಿನಗಳ ಕಾಲ ನಡೆಯುವ ಸಾಧ್ಯತೆಯಿದೆ. ಈಗಾಗಲೇ ಅಧಿವೇಶನ ನಡೆಯುವ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಇತರ ಕಾಂಗ್ರೆಸ್‌
ನಾಯಕರ ಜತೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

Advertisement

ಡಿ.7 ರಿಂದ 9ರವರೆಗೆ ಧಾರವಾಡದಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಆ ಸಮಯದಲ್ಲೇ ವಿಧಾನಮಂಡಲ ಅಧಿವೇಶನ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಡಿ.3 ರಿಂದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಬಂದ ನಂತರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next