Advertisement

ಬಡ್ತಿ ಮೀಸಲಾತಿಗಾಗಿ ನವೆಂಬರ್‌ನಲ್ಲಿ ಅಧಿವೇಶನ: ಸಚಿವ ಆಂಜನೇಯ

06:45 AM Sep 18, 2017 | Team Udayavani |

ಚಿತ್ರದುರ್ಗ: ಬಡ್ತಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್‌ ಅಂತ್ಯದೊಳಗೆ ವಿಶೇಷ ಅಧಿವೇಶನ ಕರೆದು ಕಾಯ್ದೆ ಮಂಡಿಸಿ ವಿಧಾನಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ನೌಕರರಹಿತ ಕಾಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌. ಆಂಜನೇಯ ತಿಳಿಸಿದರು. 

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸುಗ್ರೀವಾಜ್ಞೆ ಹೊರಡಿಸಿದ್ದನ್ನು ರಾಜ್ಯಪಾಲರು ಅಂಗೀಕರಿಸದೆ ಸದನದಲ್ಲಿ ಮಂಡಿಸಿ ಎಂದಿದ್ದರು. ಅಲ್ಲದೆ ಬಡ್ತಿ ಮೀಸಲಾತಿ ಸಂಬಂಧ ಸುಪ್ರಿಂಕೋರ್ಟ್‌ ನೀಡಿರುವ ತೀರ್ಪನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next