ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ 350ಕ್ಕಿಂತ ಅಧಿಕ ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿ ಹಾಕಿಕೊಂಡಿರುವ ಬಿಜೆಪಿ, ಯುವಕರು, ರೈತರು ಮತ್ತು ಬಡವರ ಮೇಲೆ ಹೆಚ್ಚಿನ ಗಮನ ಹರಿಸಲು ಮುಂದಾಗಿದೆ. ಈ ಬಗ್ಗೆ ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವ ಮಾಡಿದ್ದಾರೆ. ಶೇ. 50ರಷ್ಟು ಮತಗಳ ಟಾರ್ಗೆಟ್ ಇಟ್ಟುಕೊಳ್ಳುವಂತೆಯೂ ಸೂಚಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ವಿವಿಧ ರಾಜ್ಯಗಳ ಬಿಜೆಪಿ ಘಟಕಗಳು ಯುದ್ದೋಪಾದಿಯಲ್ಲಿ ಕೆಲಸ ಮಾಡುವ ಅಗತ್ಯವಿದೆ ಎಂದು ಪ್ರಧಾನಿ ಸಲಹೆ ನೀಡಿದ್ದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾಬ್ಡೆ ಹೇಳಿದ್ದಾರೆ.
ಬಡವರು, ಯುವ ಸಮುದಾಯ, ರೈತರು ಮತ್ತು ಮಹಿಳೆಯರಿಗಾಗಿ ಕೇಂದ್ರ ಸರಕಾರ ಜಾರಿಗೊಳಿಸಿದ ವಿವಿಧ ಯೋಜನೆಗಳು ಸಮರ್ಪಕವಾಗಿ ಜಾರಿ ಯಾಗಬೇಕು. ಪ್ರತೀ ಬೂತ್ ಮಟ್ಟದಲ್ಲಿ ಕೂಡ ಶೇ.10 ಮತಗಳು ಹೆಚ್ಚಾಗಲು ಯೋಜನೆಗಳು ಸಮರ್ಪಕವಾಗಿ ಜಾರಿ ಯಾಗುವ ಬಗ್ಗೆ ಜನರಿಗೆ ಮನ ವರಿಕೆ ಮಾಡಿಕೊಡಬೇಕಾಗಿದೆ ಎಂದೂ ಸಲಹೆ ನೀಡಿದ್ದಾರೆ.
ಮತ ಪ್ರಮಾಣ ಶೇ.10ರಷ್ಟು ಏರಿಕೆಗೆ ಶ್ರಮಿಸಿ: 2019ರ ಲೋಕಸಭೆ ಚುನಾ ವಣೆಯಲ್ಲಿ ದೇಶದಲ್ಲಿ ಬಿಜೆಪಿಗೆ ಶೇ.37 ರಷ್ಟು ಮತಗಳು ಹಾಗೂ ಒಟ್ಟಾರೆ ಎನ್‌ಡಿಎಗೆ ಶೇ.45ರಷ್ಟು ಮತಗಳು ಬಂದಿದ್ದವು. 2024ರ ಸಾರ್ವ ತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಮತ ಪ್ರಮಾಣವನ್ನು ಶೇ.10ರಷ್ಟು ಏರಿಕೆ ಆಗುವ ನಿಟ್ಟಿನಲ್ಲಿ ತಳಮಟ್ಟದಿಂದ ಸಂಘ ಟನೆಯನ್ನು ಬಲಪಡಿಸುವಂತೆ ಬಿಜೆಪಿ ನಾಯಕರಿಗೆ ಮೋದಿ ಕರೆ ನೀಡಿದ್ದಾರೆ. ಈ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ದೊಂದಿಗೆ ಹ್ಯಾಟ್ರಿಕ್ ಗೆಲುವಿಗೆ ಶ್ರಮಿ ಸುವಂತೆ ಮನವಿ ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಕ್ಷೇತ್ರಗಳಲ್ಲಿ ಹಾಗೂ ಒಟ್ಟಾರೆ ಎನ್‌ಡಿಎ 353 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು.