ಲಕ್ನೋ: ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಆಡಳಿತಾರೂಢ ಜನತಾ ಪಕ್ಷಕ್ಕೆ ಮತ್ತೊಂದು ಭಾರೀ ಹಿನ್ನಡೆಯಾಗಿದ್ದು, ಬುಧವಾರ (ಜನವರಿ 12) ಪರಿಸರ ಖಾತೆ ಸಚಿವ ದಾರಾ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪಾದಯಾತ್ರೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ : ಸಚಿವ ಅಶ್ವತ್ಥನಾರಾಯಣ್ ಪ್ರತಿಕ್ರಿಯೆ
ಯೋಗಿ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ರಾಜೀನಾಮೆ ನೀಡಿದ್ದರು. ಅಲ್ಲದೇ ನಾಲ್ವರು ಬಿಜೆಪಿ ಶಾಸಕರು ರಾಜೀನಾಮೆ ನೀಡಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಬೆನ್ನಲ್ಲೇ ದಾರಾ ಸಿಂಗ್ ರಾಜೀನಾಮೆ ನೀಡಿದ್ದಾರೆ.
ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ಶಾಸಕ ಅವತಾರ್ ಸಿಂಗ್ ಕೂಡಾ ರಾಜೀನಾಮೆ ನೀಡಿದ್ದು, ಬುಧವಾರ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕ್ ದಳಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಶಾಕ್ ನಡುವೆಯೇ, ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರು, ಸದ್ಯದಲ್ಲೇ ಯೋಗಿ ಸರಕಾರದ 13 ಶಾಸಕರು ರಾಜೀನಾಮೆ ನೀಡಿ ಎಸ್ ಪಿಗೆ ಸೇರಲಿದ್ದಾರೆ ಎಂದು ಘೋಷಿಸಿದ್ದಾರೆ. ಜತೆಗೆ ಉ.ಪ್ರದೇಶದಲ್ಲಿ ತಮ್ಮ ಪಕ್ಷವು ಎಸ್‌ಪಿ ಜತೆ ಮೈತ್ರಿ ಮಾಡಿಕೊಳ್ಳಲಿದೆ ಎಂದೂ ಹೇಳಿದ್ದಾರೆ.