ವಿಜಯಪುರ: ಜಿಲ್ಲೆಯಲ್ಲಿ ಗ್ರಾ.ಪಂ ಚುನಾವಣೆ ಕಾವು ಏರುವ ಹಂತದಲ್ಲೇ ದ್ವೇಷದ ಕಿಚ್ಚು ಆರಂಭಗೊಂಡಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸ್ಪರ್ಧಿಯೊಬ್ಬರ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ, ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ ಮಾಡಲಾಗಿದೆ.
ಮುದ್ದೇಬಿಹಾಳ ತಾಲೂಕಿನ ಸರೂರ ಗ್ರಾಮದ ಮುತ್ತಪ್ಪ ಚಲವಾದಿ ಎಂಬವರ ಕಬ್ಬಿನ ಗದ್ದೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಅಗ್ನಿ ದುರಂತದಲ್ಲಿ ಒಂದು ಎಕರೆ ಪ್ರದೇಶದ ಕಬ್ಬು ಸುಟ್ಟು ಕರಕಲಾಗಿದೆ. ಅಗ್ನಿ ದುರಂತ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ.
ಕವಡಿಮಟ್ಟಿ ಗ್ರಾ.ಪಂ. ವ್ಯಾಪ್ತಿಯ ಸರೂರ ಗ್ರಾಮದಿಂದ ಸ್ಪರ್ಧೆ ಬಯಸಿ ಮುತ್ತಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಇದನ್ನು ಸಹಿಸದೇ ಎದುರಾಳಿಗಳು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಮುದ್ದೇಬಿಹಾಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅಧಿಕಾರಿಗಳ ಒತ್ತಡಕ್ಕೆ ಮಣಿದು ಕೆಲಸಕ್ಕೆ ಹಾಜರಾದ ಬಸ್ ಚಾಲಕ ಹೃದಯಾಘಾತದಿಂದ ಸಾವು
ಇದನ್ನೂ ಓದಿ: ದಲಿತರು, ಹಿಂದುಳಿದ ವರ್ಗದವರು ಗೋಮಾಂಸ ಸೇವಿಸುವುದಿಲ್ಲ: ಸಿದ್ದು ಹೇಳಿಕೆಗೆ ಸುಧಾಕರ್ ಆಕ್ರೋಶ