Advertisement

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸಿ: ಕೇಂದ್ರಕ್ಕೆ ಸಿಎಂ ಪತ್ರ

08:58 PM Jun 17, 2023 | Team Udayavani |

ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್‌ (ಅಖೀಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಆಗ್ರಹಿಸಿದ್ದಾರೆ.

Advertisement

ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದು ಎಂದು ಗುರುತಿಸಲಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ಹವಾಮಾನ ವೈಪರೀತ್ಯದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ಪರಿಸ್ಥಿತಿಯನ್ನು ಈ ಜಿಲ್ಲೆ ಎದುರಿಸುತ್ತಿದೆ. ಈ ಎಲ್ಲ ಸ್ಥಿತಿಗತಿಗಳಿಂದ ರಾಯಚೂರಿನಲ್ಲಿ ಬಲಿಷ್ಠ ಮತ್ತು ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗಕ್ಕೆ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಸಿಕ್ಕಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ.

ಈ ಭಾಗಕ್ಕೆ ಏಮ್ಸ್‌ ಬರಬೇಕು ಎಂದು ಇಲ್ಲಿನ ಜನರು ಮತ್ತು ಜನಪ್ರತಿನಿಧಿಗಳು ಸತತವಾಗಿ ಬೇಡಿಕೆ ಸಲ್ಲಿಸುತ್ತಿದ್ದಾರೆ. ಹಾಗೆಯೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತಿ ಆದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next