Advertisement
ರಾಜ್ಯದಲ್ಲಿ ಸುಮಾರು 63 ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕ್ ಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳ ಕೃಷಿ ಸಾಲ ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದ್ದು, ಇದು ಕೃಷಿ ಕ್ಷೇತ್ರದ ಹಿನ್ನಡೆಗೆ ಕಾರಣವಾಗಲಿದೆ ಎಂದು ನ.12ರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿದರು.
Related Articles
Advertisement
ಕೇಂದ್ರ ಸರ್ಕಾರ ಹೊಸದಾಗಿ ಸಹಕಾರ ಸಚಿವಾಲಯವನ್ನು ಆರಂಭ ಮಾಡಿದೆ. ಆದರೆ ಯಾವ ಉದ್ದೇಶಕ್ಕೆ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂಬುದು ಗೊತ್ತಿಲ್ಲ. ಈ ಇಲಾಖೆಯಿಂದ ಯಾವುದೇ ರಾಜ್ಯಗಳಿಗೆ ಅನುಕೂಲವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೆಲವು ಡಿಸಿಸಿ ಬ್ಯಾಂಕುಗಳೂ ಸೇರಿದಂತೆ ಅಪೆಕ್ಸ್ ಬ್ಯಾಂಕ್ ಕೂಡ ಹೆಚ್ಚಿನ ಸ್ವಂತ ಬಂಡವಾಳ ಹೊಂದಿಲ್ಲ. ಹೀಗಾಗಿ ನಬಾರ್ಡ್ ನೆರವನ್ನು ಅವಲಂಬಿಸುವುದು ಅನಿವಾರ್ಯ. ಕೃಷಿ ಸಾಲ ವಿತರಣೆಯಿಂದ ಡಿಸಿಸಿ ಬ್ಯಾಂಕುಗಳ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಿಲ್ಲ. ರಾಜ್ಯದ ಕೆಲವು ಡಿಸಿಸಿ ಬ್ಯಾಂಕುಗಳು ಮಾತ್ರ ವಾಣಿಜ್ಯ ಸಾಲ ವಿತರಣೆ ಮಾಡುವ ಮೂಲಕ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿವೆ ಎಂದರು.
ರಾಜ್ಯದಲ್ಲಿ ಈಗಾಗಲೇ ಕೃಷಿ ಚಟುವಟಿಕೆಗಳು ಚುರುಕಾಗಿವೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗೆ ಹಣದ ಅಗತ್ಯವಿದ್ದು, ರೈತರು ಸಹಕಾರಿ ಬ್ಯಾಂಕುಗಳ ಕೃಷಿ ಸಾಲದ ನಿರೀಕ್ಷೆಯಲ್ಲಿದ್ದಾರೆ. ನಬಾರ್ಡ್ ಸಾಲದ ಮೊತ್ತ ಕಡಿಮೆ ಮಾಡುವುದರಿಂದ ಮುಂಗಾರು ಹಂಗಾಮು ಮಾತ್ರ ಅಲ್ಲ ಹಿಂಗಾರು ಹಂಗಾಮಿಗೂ ಕೃಷಿ ಸಾಲ ವಿತರಣೆಗೆ ಸಮಸ್ಯೆಯಾಗಲಿದೆ. ಎಲ್ಲ ರೈತರಿಗೂ ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಪರಿಸ್ಥಿತಿ ಇಲ್ಲ. ಹೆಚ್ಚು ಷರತ್ತುಗಳಿಲ್ಲದೆ ಕೃಷಿ ಸಾಲ ವಿತರಣೆ ವ್ಯವಸ್ಥೆ ಇರುವುದು ಸಹಕಾರಿ ಬ್ಯಾಂಕುಗಳಲ್ಲಿ ಮಾತ್ರ ಎಂದರು.
ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮೊತ್ತ ಕಡಿತ ಮಾಡದಂತೆ ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರದ ಬಳಿ ನಿಯೋಗ ತೆರಳುವ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಈ ಬಗ್ಗೆ ತಕ್ಷಣದಲ್ಲಿ ಕೇಂದ್ರಕ್ಕೆ ಪತ್ರ ಬರೆಯುವ ಬಗ್ಗೆ ಕೂಡಾ ಸಿಎಂ ಅವರೊಂದಿಗೆ ಮಾತನಾಡಲಾಗುವುದು. – ಶಿವಾನಂದ ಪಾಟೀಲ, ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿಮಾರುಕಟ್ಟೆ ಸಚಿವ