ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ತನ್ನ ಕುಟುಂಬದ ಹಲವು ಸದಸ್ಯರನ್ನು ಹತ್ಯೆಗೈದ ಹಾಗೂ ತನ್ನ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಬಿಡುಗಡೆಗೊಳಿಸಿರುವುದನ್ನು ಪ್ರಶ್ನಿಸಿ ಗುಜರಾತ್ ಗಲಭೆ ಸಂತ್ರಸ್ತೆ ಬಿಲ್ಕಿಸ್ ಬಾನೋ ಅರ್ಜಿಯನ್ನು ಸುಪ್ರೀಂಕೋರ್ಟ್ ಶನಿವಾರ (ಡಿಸೆಂಬರ್ 17) ವಜಾಗೊಳಿಸಿದ್ದು, ಇದರಿಂದ ಬಿಲ್ಕಿಸ್ ಕಾನೂನು ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.
ಇದನ್ನೂ ಓದಿ:ಭಾರತದಲ್ಲಿ ಮೊದಲ ದಿನವೇ ಕೋಟಿ ಕೋಟಿ ಕಲೆಕ್ಷನ್ ಮಾಡಿದರೂ ಆ ಸಿನಿಮಾದ ದಾಖಲೆ ಮುರಿಯದ ʼʼಅವತಾರ್ -2”
ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಗುಜರಾತ್ ಸರ್ಕಾರಕ್ಕೆ ನೀಡಿರುವ ಮೇ 2022ರ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕೋರಿ ಬಿಲ್ಕಿಸ್ ಬಾನೋ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು.
ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳು ಆಗಸ್ಟ್ 15ರಂದು ಜೈಲಿನಿಂದ ಬಿಡುಗಡೆಗೊಂಡಿದ್ದರು. ಕೇಂದ್ರ ಗೃಹ ಸಚಿವಾಲಯದ ಅನುಮತಿಯೊಂದಿಗೆ ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ 1992ರ ನಿಯಮದಂತೆ ರಿಲೀಸ್ ಮಾಡಿತ್ತು.
ನೂತನ ನಿಯಮದ ಪ್ರಕಾರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಅವಧಿಗೂ ಮುನ್ನ ಬಿಡುಗಡೆಗೊಳಿಸುವಂತಿಲ್ಲ. ಆದರೆ ಸುಪ್ರೀಂಕೋರ್ಟ್, 1992ರ ನಿಯಮದ ಗುಜರಾತ್ ಸರ್ಕಾರದ ವಾದವನ್ನು ಒಪ್ಪಿದ್ದು, ತಾಂತ್ರಿಕವಾಗಿ 11 ಆರೋಪಿಗಳನ್ನು ಬಿಡುಗಡೆಗೊಳಿಸಬಹುದಾಗಿದೆ ಎಂದು ತಿಳಿಸಿತ್ತು.