Advertisement

ಶಿಕ್ಷಕರ ಸಮಸ್ಯೆ ಇತ್ಯರ್ಥಕ್ಕೆ ಸಿಎಂ ಭರವಸೆ: ನಿರಾಣಿ

01:19 PM May 18, 2020 | Suhan S |

ಬೀಳಗಿ: ರಾಜ್ಯದ ಶೈಕ್ಷಣಿಕ ಹಾಗೂ ಶಿಕ್ಷಕರ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಎಲ್ಲ ಸದಸ್ಯರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಂತ-ಹಂತವಾಗಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಬಡ ಶಿಕ್ಷಕ ಸಿಬ್ಬಂದಿಗೆ ಆಹಾರ ಕಿಟ್‌ ಕೂಡಲೆ ಕೊಡಲು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. ಉಳಿದ ಬೇಡಿಕೆಗಳ ಕುರಿತು ಮೇ 21ರಂದು ಅಧಿಕಾರಿಗಳ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ತಿಳಿಸಿದರು.

ವಿಡಿಯೋ ಕಾನ್ಫೆರೆನ್ಸ್‌: ಶಿಕ್ಷಣ ಸಚಿವ ಎಸ್‌.ಸುರೇಶಕುಮಾರ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್‌ ಸದಸ್ಯರೊಂದಿಗೆ ವಿಡಿಯೋ ಕಾನ್ಫೆರೆನ್ಸ್‌ ನಡೆಸುವ ಮೂಲಕ, ಪ್ರಸಕ್ತ ಶಿಕ್ಷಣ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next