Advertisement
ಸೇವಾ ಸಿಂಧು 31ನೇ ಮಿಷನ್ ಮೋಡ್ ಯೋಜನೆಯಾಗಿದೆ. ಎಲ್ಲ ಸರ್ಕಾರಿ ಇಲಾಖೆಯಲ್ಲಿನ ಸೇವೆಯನ್ನು ಗ್ರಾಹಕರ ಮನೆ ಬಾಗಿಲಿಗೆ ಆನ್ ಲೈನ್ ಮೂಲಕ ತಲುಪಿಸುವ ಸೇವೆ ಇದಾಗಿದೆ. ಪ್ರಸ್ತುತ ಸೇವಾ ಸಿಂಧು ಯೋಜನೆಯಡಿ ಕಂದಾಯ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಔಷಧಗಳ ನಿಯಂತ್ರಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಾರಿಗೆ ಇಲಾಖೆ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ, ಕೃಷಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಲಭ್ಯ ಇವೆ. ಎಲ್ಲ ಸೇವೆಗಳು ಸೇವಾ ಸಿಂಧು www.sevasindhu.karnataka.gov.in ವೆಬ್‌ಸೈಟ್ ಮೂಲಕ ಸಾಮಾನ್ಯ ಸೇವಾ ಕೇಂದ್ರ ಹಾಗೂ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಜಿಲ್ಲೆಯಲ್ಲಿ ಒಟ್ಟು 289 ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧುಗೆ ನೋಂದಾಯಿಸಿಕೊಂಡು ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. Advertisement
ಸೇವಾ ಸಿಂಧು: 47 ಇಲಾಖೆ ಸೇವೆ ಲಭ್ಯ
08:49 AM Jul 05, 2020 | Suhan S |
Advertisement
Udayavani is now on Telegram. Click here to join our channel and stay updated with the latest news.