Advertisement

ನ 3 ರಂದು 6 ರಾಜ್ಯಗಳ 7 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ

03:09 PM Oct 03, 2022 | Team Udayavani |

ನವದೆಹಲಿ: ಆರು ರಾಜ್ಯಗಳಲ್ಲಿ ಖಾಲಿ ಇರುವ ಏಳು ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ.

Advertisement

ಬಿಹಾರದ ಮೊಕಾಮಾ ಮತ್ತು ಗೋಪಾಲ್‌ಗಂಜ್, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಆದಂಪುರ, ತೆಲಂಗಾಣದ ಮುನುಗೋಡೆ, ಉತ್ತರ ಪ್ರದೇಶದ ಗೋಲಾ ಗೋರಖ್‌ನಾಥ್ ಮತ್ತು ಒಡಿಶಾದ ಧಮ್‌ನಗರ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ : ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ರಾಹುಲ್ ಭೇಟಿ ; ಕೈ ನಾಯಕರ ಸಾಥ್

ಅಕ್ಟೋಬರ್ 7ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನವೆಂಬರ್ 6 ರಂದು ಮತ ಎಣಿಕೆ ನಡೆಯಲಿದೆ ಎಂದು ಎಂದು ಚುನಾವಣಾ ಆಯೋಗದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next