ಶಿವಮೊಗ್ಗ: ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಗಾಡಿಕೊಪ್ಪದ ತುಂಗಾ ನಾಲೆ ಬಳಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ
ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಕಾರು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ. ರಸ್ತೆ ಮೇಲೆ ಎಮ್ಮೆಗಳ ಮೃತದೇಹಗಳು ಬಿದ್ದಿರುವುದು ಮನಕಲಕುವಂತಿತ್ತು. ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಬಚಾವಾಗಿದ್ದಾರೆ.
Related Articles
ಎಮ್ಮೆಗಳ ಮಾಲೀಕರ ಪತ್ತೆ ಕಾರ್ಯ ನಡೆಯುತ್ತಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.