Advertisement

ಅಗ್ನಿ ಅನಾಹುತ; ನಾಲ್ವರು ಮಕ್ಕಳು, ಮೂವರು ಮಹಿಳೆಯರು ಸೇರಿ ಏಳು ಮಂದಿ ಜೀವಂತ ದಹನ

08:14 AM May 19, 2020 | Nagendra Trasi |

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನ ಕಾಂಪ್ಲೆಕ್ಸ್ ವೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಏಳು ಮಂದಿ ಜೀವಂತವಾಗಿ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ. ಇದರಲ್ಲಿ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ದೇಹವೂ ಸುಟ್ಟು ಹೋಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವುದಾಗಿ ವರದಿ ತಿಳಿಸಿದೆ.

ಬೆಂಕಿ ದುರಂತ ಸಂಭವಿಸಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ರೋಶ್ನಿ ಘರ್ ರಸ್ತೆಯಲ್ಲಿನ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಅದು ಮೇಲ್ಗಡೆ ಇರುವ ಮನೆಗಳಿಗೂ ವ್ಯಾಪಿಸಿತ್ತು. ಅದು ಪೇಯಿಂಟ್ ಅಂಗಡಿ ಆಗಿದ್ದರಿಂದ ಬೆಂಕಿ ಕೂಡಲೇ ಹೊತ್ತಿಕೊಂಡಿರುವುದಾಗಿ ವರದಿ ವಿವರಿಸಿದೆ.

2ನೇ ಅಂತಸ್ತಿನ ಮನೆಯಲ್ಲಿದ್ದ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಜೀವಂತವಾಗಿ ಸುಟ್ಟು ಹೋಗಿದ್ದರು. ಅಗ್ನಿಶಾಮಕ ದಳ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಿಸುವ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next