ಹೊಸದಿಲ್ಲಿ: ಏಳು ಮಂದಿ ಭಾರತೀಯರನ್ನು ಆಫ್ರಿಕನ್ ದೇಶದ ಲಿಬಿಯಾದಲ್ಲಿ ಅಪಹರಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಬಹಿರಂಗಪಡಿಸಿದೆ.
ಆಂಧ್ರಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶದಕ್ಕೆ ಸೇರಿದ ಏಳು ಮಂದಿ ಕಳೆದ ತಿಂಗಳು ಅಪಹರಣಕ್ಕೆ ಒಳಗಾಗಿದ್ದಾರೆ. ಈ ಕುರಿತಂತೆ ಭಾರತ ಸರ್ಕಾರವು ಲಿಬಿಯಾ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದೆ ಎಂದು ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಲಾಲು, ನಿತೀಶ್ ವಿದ್ಯಾರ್ಥಿಗಳಾಗಿರುವಾಗ ಪಾಸ್ವಾನ್ ವಿಧಾನಸಭಾ ಸದಸ್ಯ!
ಸೆಪ್ಟೆಂಬರ್ 14 ರಂದು ಭಾರತಕ್ಕೆ ಬರಲು ಟ್ರಿಪೊಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅಶ್ವೆರಿಫ್ ಎಂಬ ಸ್ಥಳದಲ್ಲಿ ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಭಾರತೀಯ ಪ್ರಜೆಗಳು ನಿರ್ಮಾಣ ಮತ್ತು ತೈಲ ಸರಬರಾಜು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸರ್ಕಾರವು ಅಪಹರಣಕ್ಕೀಡಾದವರ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ. ಲಿಬಿಯಾ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ, ಶೀಘ್ರದಲ್ಲಿ ಭಾರತೀಯರ ಬಿಡುಗಡೆಗೆ ಶ್ರಮಿಸುತ್ತೇವೆ ಎಂದು ಅವರು ಹೇಳಿದರು.