Advertisement

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಯ 7 ಮಂದಿ ಸಹಚರರ ಸೆರೆ, ಶಸ್ತ್ರಾಸ್ತ್ರ ವಶಕ್ಕೆ

11:27 AM Mar 13, 2021 | Team Udayavani |

ಜಮ್ಮು-ಕಾಶ್ಮೀರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದಕ ಸಂಘಟನೆಯ ಏಳು ಸಹಚರರನ್ನು ಬಂಧಿಸಿರುವುದಾಗಿ ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ: 33 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಪೊಲೀಸರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ಶೋಪಿಯಾನ್ ಪೊಲೀಸರು ನಾಕಾಬಂದಿ ನಡೆಸಿ ಪರಿಶೀಲನೆ ಮಾಡುತ್ತಿದ್ದ ಸಂದರ್ಭದಲ್ಲಿ ಏಳು ಮಂದಿಯನ್ನು ಬಂಧಿಸಿದ್ದು, ಎರಡು ಹ್ಯಾಂಡ್ ಗ್ರೆನೇಡ್ಸ್, ಮೂರು ಎಕೆ ಮಾದರಿಯ ಮ್ಯಾಗಜೈನ್ಸ್ ಅನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದೆ.

ಏಳು ಮಂದಿ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಸಹಚರರು ಎಂದು ವಿಚಾರಣೆ ವೇಳೆ ತಿಳಿಸಿರುವುದಾಗಿ ವರದಿ ಹೇಳಿದೆ. ಏಳು ಶಂಕಿತ ಉಗ್ರರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ 13, 18, 20, 23, 38 ಯುಎಲ್ ಎ ಅಡಿ ಶೋಪಿಯಾನ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಬಂಧಿತರನ್ನು ಸಮಿವುಲ್ಲಾ ಫಾರೂಖ್, ಹಿಲಾಲ್ ಅಹ್ಮದ್, ರಮೀಝ್ ವಾನಿ, ರೌಫ್ ಅಹ್ಮದ್, ಝಾಹಿದ್ ಹುಸೈನ್ ವಾನಿ, ಫೈಝಾನ್ ಅಹ್ಮದ್ ಖಾನ್, ಶಾಹೀದ್ ಅಹ್ಮದ್ ರಾಥೆರ್ ಎಂದು ಗುರುತಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next