ಅಹ್ಮದಾಬಾದ್: ಇತ್ತೀಚಿಗೆ ದೆಹಲಿಯ ನೂರಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ರೀತಿಯಲ್ಲೇ ಅಹ್ಮದಾಬಾದ್ ನ ಆರು ಏಳು ಶಾಲೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೋಮವಾರ ದೆಹಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್) ಮತ್ತು ಆನಂದ್ ನಿಕೇತನ್ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು ಕೂಡಲೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಅಲ್ಲದೆ ಶಾಲಾ ಮಕ್ಕಳನ್ನು ಕೂಡಲೇ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಬೆದರಿಕೆ ಇಮೇಲ್‌ಗಳ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಕೂಡಲೇ ಬಾಂಬ್ ಸ್ಕ್ವಾಡ್‌ಗಳೊಂದಿಗೆ ನಗರದ ವಿವಿಧ ಶಾಲೆಗಳನ್ನು ತಲುಪಿ ಕಾರ್ಯಾಚರಣೆ ಕೈಗೊಂಡಿದೆ.
ಕೆಲವು ದಿನಗಳ ಹಿಂದೆ ದೆಹಲಿ-ಎನ್‌ಸಿಆರ್‌ನಲ್ಲಿ 150 ಕ್ಕೂ ಹೆಚ್ಚು ಶಾಲೆಗಳು ಮತ್ತು ಲಕ್ನೋದಲ್ಲಿ ಒಂದು ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು ಇದಾದ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಯಾವುದೇ ಕುರುಹು ಸಿಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬೆದರಿಕೆ ಎಂದು ಹೇಳಲಾಯಿತು ಇದಾದ ಬೆನ್ನಲ್ಲೇ ಇದೀಗ ಅಹ್ಮದಾಬಾದ್ ನಲ್ಲಿ ಮತ್ತೆ ಅದೇ ರೀತಿಯ ಇಮೇಲ್ ಬೆದರಿಕೆ ಬಂದಿದ್ದು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ