Advertisement

ಮಂಗಳೂರು : ಹತ್ತಕ್ಕೂ ಹೆಚ್ಚು ಪಿಎಫ್ಐ ನಾಯಕರು ಪೊಲೀಸರ ವಶಕ್ಕೆ

08:27 AM Sep 27, 2022 | Team Udayavani |

ಮಂಗಳೂರು : ನಗರದಲ್ಲಿ ಅಹಿತಕರ ಘಟನೆ ನಡೆಯಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸರು ಕೆಲ ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಎನ್ ಐಎ ತಂಡ ಕೆಲ ದಿನಗಳ ಹಿಂದೆ ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರಿಂದ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರಿನಲ್ಲಿ ಪೊಲೀಸರು ಸುಮಾರು ಹತ್ತಕ್ಕೂ ಹೆಚ್ಚು ಮಂದಿಯನ್ನು, ಸೆಕ್ಷನ್ 107 151 ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಭಾರತಕ್ಕೆ ಆಗಮಿಸಿದ ದಕ್ಷಿಣ ಆಫ್ರಿಕಾ ತಂಡ; ಪದ್ಮನಾಭಸ್ವಾಮಿ ದೇಗುಲಕ್ಕೆ ಭೇಟಿಯಿತ್ತ ಮಹಾರಾಜ್‌

Advertisement

Udayavani is now on Telegram. Click here to join our channel and stay updated with the latest news.

Next