Advertisement

ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ : ದೆಹಲಿಯಲ್ಲಿ ಸಿಎಂ

11:00 PM Jan 16, 2023 | Team Udayavani |

ನವದೆಹಲಿ : ಚುನಾವಣೆ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಗಿದ್ದು ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ದೆಹಲಿಯಲ್ಲಿ ಸೋಮವಾರ ರಾತ್ರಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Advertisement

ನವದೆಹಲಿಯ ಎನ್‌ಡಿಎಂಸಿ ಕನ್ವೆನ್ಷನ್ ಸೆಂಟರ್‌ನಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಿದ್ದೇನೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇವೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬಿರಿಲ್ಲ.ಜನ ಸಂಕಲ್ಪ ಯಾತ್ರೆಗೆ ಉತ್ತರ ಪ್ರತಿಕ್ರಿಯೆ ನೀಡಿದೆ ಎಂದರು.

ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ. ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದ್ದೇವೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next