ಹರ್ಯಾಣ: ಭಾನುವಾರ ಮುಂಜಾನೆ ಅಂಬಾಲಾ-ಯಮುನಾನಗರ-ಸಹಾರನ್‌ಪುರ ಹೆದ್ದಾರಿಯಲ್ಲಿ ದಟ್ಟ ಮಂಜು ಆವರಿಸಿದ ಪರಿಣಾಮ ವಾಹನಗಳು ಒಂದಕ್ಕೊಂದು ಢಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಕುರಿತು ಮಾತನಾಡಿದ ಸಂಚಾರ ಪೊಲೀಸ್ ಅಧಿಕಾರಿ ಲೋಕೇಶ್ ರಾಣಾ ಹೆದ್ದಾರಿಯಲ್ಲಿ ಸುಮಾರು 10 ರಿಂದ 15 ವಾಹನಗಳು ಪರಸ್ಪರ ಢಿಕ್ಕಿ ಹೊಡೆದಿದ್ದು ಪೊಲೀಸ್ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿ ಬಳಿಕ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಡಲಾಯಿತು ಎಂದು ಹೇಳಿದರು.
ರಸ್ತೆ ಅಪಘಾತದಿಂದ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ನಿಂತ್ತಿದ್ದ ವಾಹನಗಳನ್ನು ಕ್ರೇನ್ ಮೂಲಕ ತೆರವುಗೊಳಿಸಿ ಬಳಿಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ದಟ್ಟ ಮಂಜು ಆವರಿಸಿದ್ದು ವಾಹನ ಸವಾರರು ಪರದಾಡುವಂತಾಗಿದೆ.
ಇದನ್ನೂ ಓದಿ: ಶಾಸ್ತ್ರೋಕ್ತ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿರಿಸಿದ 11 ಜೋಡಿ