Advertisement
ಅವರು ಸುಮಾರು ಹತ್ತು ವರ್ಷಗಳಿಂದ ಮೂಡುಬಿದಿರೆಯ ಶ್ರೀ ವೆಂಕಟರಮಣ ದೇಗುಲದಲ್ಲಿ ಸಹಾಯಕ ಅರ್ಚಕರಾಗಿದ್ದು, ಸೋಮವಾರ ಅವರು ಉಪ್ಪಿನಂಗಡಿಯ ಮನೆಗೆ ಬಂದಿದ್ದು, ಅಲ್ಲಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಮಂಗಳವಾರ ರಾತ್ರಿ ವೇಳೆಗೆ ಜ್ವರ ಉಲ್ಬಣಗೊಂಡಿತ್ತು. ತತ್‌ಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Uppinangady: ತೀವ್ರ ಜ್ವರ; ಅರ್ಚಕ ಸಾವು
08:07 PM May 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.